ಬೆಂಗಳೂರು:
ದಕ್ಷಿಣ ಭಾರತದ ಸಿನಿಮಾ ರಂಗದ ಮೇಲೆ ಹಿಂದಿ ಸಿನಿಮಾ ರಂಗದವರ ದಬ್ಬಾಳಿಕೆ ಇಂದು-ನಿನ್ನೆಯದಲ್ಲ. ಈ ಬಗ್ಗೆ ಸ್ಪೋಟಕ ಮಾಹಿತಿಯೊಂದನ್ನು ಕನ್ನಡದ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಅವರು ಹೊರ ಹಾಕಿದ್ದಾರೆ. ಅಂದು ರಾಜ್ ಈಗ ಸುದೀಪ್ ಎಂಬ ಶೀರ್ಷಿಕೆಯಲ್ಲಿ ಹಿಂದಿನ ಘಟನೆಯೊಂದನ್ನು ನೆನಪಿಸಿಕೊಂಡಿದ್ದಾರೆ.ಗಣೇಶ್ ಕಾಸರಗೋಡು
ಇದು 40 ವರ್ಷಗಳ ಹಿಂದಿನ ಘಟನೆ. ಅಂದು ಬಿಗ್ ಬಿ ಅಮಿತಾಭ್ ಬಚ್ಚನ್ ಅಣ್ಣಾವ್ರಿಗೆ ಅವಮಾನ ಮಾಡಿದ್ದರಂತೆ. ಅಂದು ಕರ್ನಾಟಕದಲ್ಲಿ ಹಿಂದಿ ಸಿನಿಮಾಗಳು ಬ್ಯಾನ್ ಆಗಿದ್ದವು. ಈ ಬಗ್ಗೆ ಅಣ್ಣಾವ್ರ ವಿರುದ್ಧ ಬಾಲಿವುಡ್ ಮ್ಯಾಗಜೀನ್ ವರದಿ ಮಾಡಿದ್ದವು. ರಾಜ್ಕುಮಾರ್ ಮಿನಿ ಹಿಟ್ಲರ್ ಅನ್ನೊ ಟೈಟಲ್ನಲ್ಲಿ ವರದಿ ಪ್ರಕಟವಾಗಿತ್ತು.
ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣ; ನಿಮಗೆ ಗೊತ್ತಿರಬೇಕಾದ ಸಂಗತಿಗಳಿವು
ಈ ವರದಿ ಹಿಂದೆ ಅಮಿತಾಭ್ ಕೈವಾಡದ ಶಂಕೆ ವ್ಯಕ್ತವಾಗಿತ್ತು. ಸುದ್ದಿ ಪ್ರಕಟವಾಗುತ್ತಿದ್ದಂತೆ ಕರ್ನಾಟಕ ಹೊತ್ತಿ ಉರಿದಿತ್ತು. ಕರ್ನಾಟಕದ ಎಲ್ಲ ಥಿಯೇಟರ್ಗಳಲ್ಲೂ ಹಿಂದಿ ಸಿನಿಮಾ ಪ್ರದರ್ಶನ ರದ್ದಾಗಿತ್ತು. ಹಿಂದಿ ಸಿನಿಮಾ ರಿಲೀಸ್ ಮಾಡಲು ವಿತರಕರು ಹೆದರಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಶೂಟಿಂಗ್ ಬಿಟ್ಟು ಬೆಂಗಳೂರಿಗೆ ಬಂದಿದ್ದ ಬಿಗ್ ಬಿ, ಅಣ್ಣಾವ್ರ ಮುಂದೆ ಕೈ ಮುಗಿದು ಕ್ಷಮೆ ಕೇಳಿದ್ದರಂತೆ.
ಈ ಘಟನೆಯನ್ನು ಗಣೇಶ್ ಕಾಸರಗೋಡು ಅವರು ತಮ್ಮ ಫೇಸ್ಬುಕ್ ಪೇಜ್ನಲ್ಲಿ ಸಮಗ್ರವಾಗಿ ಬರೆದುಕೊಂಡಿದ್ದು, ಅದರ ಯಥಾವತ್ ರೂಪ ಈ ಕೆಳಕಂಡಂತಿದೆ…ನಿಮಗೆ ಗೊತ್ತೇ, ಡಾ. ರಾಜ್’ರನ್ನು ‘ಮಿನಿ ಹಿಟ್ಲರ್’ ಎಂದು ಕರೆದು ಅಮಿತಾಬ್ ಎಡವಟ್ಟು ಮಾಡಿಕೊಂಡಿದ್ದರು!
ಪಾಕ್ ಪ್ರಧಾನಿಗೆ ಭಾರತದ ತರಾಟೆ: ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ಟೀಕಿಸಿದ್ದಕ್ಕೆ ವ್ಯಂಗ್ಯ
ಆಗ ರಾಜ್ ಈಗ ಸುದೀಪ್ : ಇದು ಹಿಂದಿವಾಲಾಗಳ ಚಾಳಿ…
ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ನಾಳೆ ಪರಿಹಾರವಾಗಿ ಬಿಡುತ್ತದೆ ಎಂಬ ನಂಬಿಕೆಯೂ ಇಲ್ಲ. ಹಾಗೆ ನೋಡಿದರೆ ಮನಸ್ಸು ಬದಲಾಗದೇ ಈ ಕ್ಷುದ್ರ ಮನಸ್ಥಿತಿಗೊಂದು ಪರಿಹಾರವಿಲ್ಲ. ಈಗ ನಾನು ಹೇಳಲು ಹೊರಟಿರುವುದು 40 ವರ್ಷಗಳ ಹಿಂದೆ ನಡೆದು ಹೋದ ಘಟಾನುಘಟಿಗಳ ನಡುವಿನ ಪರೋಕ್ಷ ಯುದ್ಧ. ಭಾಷಾ ದ್ವೇಷದ ಜಟ್ಟಿ ಕಾಳಗ! ಕನ್ನಡದ ವರನಟ ಡಾ. ರಾಜಕುಮಾರ್ ಮತ್ತು ಹಿಂದಿ ಚಿತ್ರರಂಗದ ಬಾದ್ಷಾ ಅಮಿತಾಬ್ ನಡುವಿನ ಅಘೋಷಿತ ಭೀಕರ ಯುದ್ಧ! ನಂಬುತ್ತೀರಾ? ನಂಬಲೇ ಬೇಕು. ಏಕೆಂದರೆ ಇದು ನಿಜ…ಅಮಿತಾಭ್ ಬಚ್ಚನ್
ಇದು 1983ನೇ ಇಸವಿಯ ಸ್ಟೋರಿ. ಗೋಕಾಕ್ ಚಳುವಳಿ ಪರಾಕಾಷ್ಠೆ ತಲುಪಿದ ಸಂದರ್ಭ. ಕನ್ನಡಿಗರ ಆರಾಧ್ಯ ದೈವ ರಾಜಕುಮಾರ್ ಅವರನ್ನು ಇದ್ದಕ್ಕಿದ್ದಂತೆಯೇ ಮುಂಬಯಿಯ ಪತ್ರಿಕೆಯೊಂದು ‘ಮಿನಿ ಹಿಟ್ಲರ್’ ಎಂದು ಆರೋಪಿಸಿತು! ಆ ಪತ್ರಿಕೆಯ ಹಿಂದೆ ಬಾಲಿವುಡ್ ಬಾದ್ಷಾ ಅಮಿತಾಭ್ ಬಚ್ಚನ್ ಇದ್ದನೆಂಬ ಗುಸುಗುಸು ಸುದ್ದಿ ಹರಡಿತು.
ಸುದ್ದಿ ಕಾಡ್ಗಿಚ್ಚಾಯಿತು. ಇಡೀ ಕರ್ನಾಟಕ ಹೊತ್ತಿ ಉರಿಯಿತು. ಇದಕ್ಕೆಲ್ಲ ಕಾರಣವಾದುದೊಂದು ವರದಿ. ಆ ವರದಿ ಪ್ರಕಟವಾದದ್ದು ‘ಚಿತ್ರದೀಪ’ ಎಂಬ ಹೆಸರಿನ ಸಿನೆಮಾ ಪತ್ರಿಕೆಯಲ್ಲಿ! ಕನ್ನಡದ ವರ ನಟ ಡಾ. ರಾಜಕುಮಾರ್ ಅವರನ್ನು ಕೆಣಕಿ ಯಾರಾದರೂ ಬಚಾವಾಗುವುದುಂಟಾ? ಬಾಲಿವುಡ್ ಬಾದ್ಷಾ ಅಮಿತಾಭ್ರಂಥಾ ಅಮಿತಾಬ್ ಬಚ್ಚನ್ನೇ ಬಚಾವಾಗಲಿಲ್ಲ ಎನ್ನುವುದೇ ಇಲ್ಲಿನ ಸಬ್ಜೆಕ್ಟ್.
15ನೇ ದಿನದಲ್ಲೂ ನಿಲ್ಲದ ‘KGF 2’ : ಇದೇ ವೀಕೆಂಡ್‌ನಲ್ಲಿ ದಾಟುತ್ತಾ 1000 ಕೋಟಿ?
ಗೋಕಾಕ್ ಚಳುವಳಿ ಮುಗಿಲು ಮುಟ್ಟಿದ ದಿನಗಳವು. ಡಾ. ರಾಜಕುಮಾರ್ ಖ್ಯಾತಿ ಉತ್ತುಂಗಕ್ಕೇರಿತ್ತು. ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮಾಡಿ ಕನ್ನಡ ಭಾಷಾ ಜಾಗೃತಿಯುಂಟು ಮಾಡಿದ ವೀರ ಕನ್ನಡಿಗನೆನ್ನುವ ಹಿರಿಮೆ. ಇಡೀ ಕನ್ನಡ ಚಿತ್ರರಂಗವೇ ಈ ಹಿರಿಯಣ್ಣನ ಜೊತೆ ಗೋಕಾಕ್ ಚಳುವಳಿಗೆ ಹೆಗಲು ಕೊಟ್ಟಿತ್ತು.
ಊರಿಂದೂರಿಗೆ ಪ್ರಯಾಣಿಸುತ್ತಿರುವಾಗ ಜನಜಾತ್ರೆ. ಅದೊಂದು ವೈಭವದ ದಿನಗಳು. ರಾಜಕುಮಾರ ಅಂದರೆ ಮನೆ ಮಾತು. ಹರಸಲು, ಮಾತಾಡಿಸಲು, ಮೈ ಮುಟ್ಟಲು ಬಂದು ಸೇರುವ ಮಂದಿ ‘ಅಣ್ಣಾವ್ರ’ನ್ನು ದೇವರೆಂದು ನಂಬಿದ ದಿನಗಳವು. ಕೆಲವರಿಗೆ ‘ಅಣ್ಣ’, ಕೆಲವರಿಗೆ ‘ಕಣ್ಮಣಿ’, ಇನ್ನೂ ಕೆಲವರಿಗೆ ಸಾಕ್ಷಾತ್ ‘ದೇವ್ರು’!
ಇಂಥಾ ಹೊತ್ತಿನಲ್ಲೇ ಹಿಂದಿ ಚಿತ್ರರಂಗದ ಪ್ರಾತಿನಿಧಿಕ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ‘ಟ್ರೇಡ್ ಗೈಡ್’ ಪತ್ರಿಕೆಯಲ್ಲೊಂದು ಸುದ್ದಿ ಪ್ರಕಟವಾಯಿತು. ಅದೊಂದು ಸ್ಫೋಟಕ ಸುದ್ದಿ. ಆದರೆ ಆ ಪತ್ರಿಕೆಗೆ ಓದುಗರೇ ಇರಲಿಲ್ಲ. ಏಕೆಂದರೆ ಅದು ಹಿಂದಿ ಚಿತ್ರರಂಗದ ವ್ಯಾವಹಾರಿಕ ಪತ್ರಿಕೆ! ಇಂಥಾದ್ದೊಂದು ಪತ್ರಿಕೆ ಪ್ರಕಟವಾಗುತ್ತಿದೆ ಎನ್ನುವ ಬಗ್ಗೆ ಯಾರಿಗೂ ಮಾಹಿತಿ ಇರಲಿಲ್ಲ! ಅದು ಹಿಂದಿ ಚಿತ್ರರಂಗದ ಇಂಗ್ಲೀಷ್ ಪತ್ರಿಕೆ.
ಕೋವಿಡ್ 4ನೇ ಅಲೆ ಭೀತಿ : ರಾಜ್ಯದಲ್ಲಿ ಸವಾಲಾದ ‘ಜೀನೋಮ್ ಅನುಕ್ರಮ ಪರೀಕ್ಷೆ’
ಬಾಲಿವುಡ್’ನ ಆಗುಹೋಗು, ಲಾಭ ನಷ್ಟಗಳ ಲೆಕ್ಕಾಚಾರವನ್ನು ಒಪ್ಪಿಸುವ ಉದ್ಯಮದ ಪತ್ರಿಕೆ. ಹೀಗಾಗಿ ಜನ ಸಾಮಾನ್ಯರಿಗೆ ಅದು ಬೇಕಾಗಿರಲಿಲ್ಲ…ಆ ಕಾಲವೂ ಕೂಡಿ ಬಂತೆನ್ನಿ! ‘ಟ್ರೇಡ್ ಗೈಡ್’ ಎಂಬ ಈ ಪುಟ್ಟ ಪತ್ರಿಕೆ, ಹೆಚ್ಚು ಸರ್ಕ್ಯುಲೇಶನ್ ಇಲ್ಲದ ಪತ್ರಿಕೆ ಮುಂದೆ ಯಾವ ಮಟ್ಟದಲ್ಲಿ ಸುದ್ದಿ ಮಾಡಿತೆಂದರೆ ಅದನ್ನು ವಿವರಿಸಲು ಪದಗಳಿಲ್ಲ! ಇಷ್ಟಕ್ಕೂ ಆ ಪತ್ರಿಕೆಯಲ್ಲಿ ಪ್ರಕಟವಾದದ್ದಾದರೂ ಏನು?
‘ರಾಜಕುಮಾರ್: ಮಿನಿ ಹಿಟ್ಲರ್’ – ಎನ್ನುವ ಟೈಟಲ್’ನಲ್ಲಿ ಪ್ರಕಟವಾದ ಸುದ್ದಿ ಹೀಗಿತ್ತು : ‘ಗೋಕಾಕ್ ವರದಿ ಜಾರಿ ಹಿನ್ನೆಲೆಯಲ್ಲಿ ನಡೆದ ಚಳುವಳಿಯ ನೇತೃತ್ವ ವಹಿಸಿದ್ದ ಡಾ. ರಾಜಕುಮಾರ್ ಪರಭಾಷಾ ಚಿತ್ರಗಳಿಗೆ ಕಂಟಕಪ್ರಾಯರಾಗಿದ್ದಾರೆ ಮತ್ತು ಅವರು ಸಾಕ್ಷಾತ್ ಮಿನಿ ಹಿಟ್ಲರ್ ಥರ ವರ್ತಿಸುತ್ತಿದ್ದಾರೆ’ ಎನ್ನುವುದು ಆ ‘ಟ್ರೇಡ್ ಗೈಡ್’ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯ ಸಾರ.
ಪಿಎಸ್‌ಐ ನೇಮಕಾತಿ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ನಿರ್ಧಾರ – ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ
ನಂತರ ತಿಳಿದು ಬಂದ ಅಚ್ಚರಿ ಹುಟ್ಟಿಸುವ ವಿಷಯವೆಂದರೆ ಈ ಸುದ್ದಿಯ ಹಿನ್ನೆಲೆಯಲ್ಲಿ ಮುಂಬಯಿ ಬಾದ್ಷಾ ಅಮಿತಾಬ್ ಬಚ್ಚನ್ ಇದ್ದಾರೆ ಎನ್ನುವುದು. ಇದಕ್ಕೂ ಒಂದು ಕಾರಣವಿದೆ. ‘ಟ್ರೇಡ್ ಗೈಡ್’ ಪತ್ರಿಕೆಗೂ ಅಮಿತಾಭ್ಗೂ ಅವಿನಾಭಾವ ಸಂಬಂಧವಿದೆ ಮತ್ತು ಈ ಸಂಬಂಧದಿಂದಾಗಿಯೇ ಪರೋಕ್ಷವಾಗಿ ಅದೇ ಅಮಿತಾಭ್ನೇ ನಮ್ಮ ರಾಜಕುಮಾರ್ ವಿರುದ್ಧ ಎತ್ತಿಕಟ್ಟಲೆಂದೇ ಈ ಸುದ್ದಿಯನ್ನು ಬರೆಸಿದ್ದಾನೆ ಎನ್ನುವ ವದಂತಿ ಕೂಡಾ ಹರಡಿತು!
ಅಜಯ್ ದೇವಗನ್
ನಡೆದದ್ದು ಏನಪ್ಪಾ ಅಂದರೆ… ಡಾ. ರಾಜಕುಮಾರ್ ಹೀಗೆ ಕನ್ನಡದ ಗೋಕಾಕ್ ದಂಡಯಾತ್ರೆಗೆ ಹೊರಟಾಗ ಕೆಲವು ಪರಭಾಷಾ ಚಿತ್ರಗಳಿಗೆ ತೊಂದರೆ, ಕಿರಿ ಕಿರಿಯುಂಟಾದದ್ದು ನಿಜ. ಹಿಂದಿ ಮಾತ್ರವಲ್ಲ ತಮಿಳು, ತೆಲುಗು, ಮಲಯಾಳಂ ಚಿತ್ರಗಳಿಗೂ ತೊಂದರೆಯಾಯಿತು. ಕನ್ನಡಕ್ಕಾಗಿ ಹೊರಾಡುವುದೆಂದರೆ ಪರಭಾಷಾ ಚಿತ್ರಗಳನ್ನು ಧಿಕ್ಕರಿಸುವುದೆಂದರ್ಥವಲ್ಲ. ಆದರೆ ಅನಿವಾರ್ಯವಾಗಿ ಇಂಥಾ ಪ್ರಸಂಗಗಳು ನಡೆದು ಬಿಡುತ್ತವೆ.
ಇದಕ್ಕೆ ಇಡೀ ಹೋರಾಟದ ನೇತೃತ್ವ ವಹಿಸಿದವರೇ ಕಾರಣ ಎಂಬ ತೀರ್ಮಾನಕ್ಕೆ ಬರುವುದು ನ್ಯಾಯ ಸಮ್ಮತವಲ್ಲ. ಕನ್ನಡ ಚಿತ್ರಗಳಿಗೆ ಸಿಗದ ಥಿಯೇಟರುಗಳ ಮೇಲೆ ಚಳುವಳಿಗಾರರು ಕಣ್ಣಿಟ್ಟಿದ್ದರಲ್ಲಿ ಆಶ್ಚರ್ಯವಿಲ್ಲ. ಆದರೆ ಈ ನಡುವೆ ಬೆಂಕಿಗೆ ತುಪ್ಪ ಸುರಿಸುವಂಥಾ ಕೆಲವು ಘಟನೆಗಳು ನಡೆದೇ ಹೋದುವು. ಅಮಿತಾಭ್ ಬಚ್ಚನ್ ಚಿತ್ರ ತೆರೆ ಕಾಣಬೇಕಿದ್ದ ಚಿತ್ರ ಮಂದಿರವೊಂದರಲ್ಲಿ ಡಾ. ರಾಜಕುಮಾರ್ ಅವರ ಚಿತ್ರ ತೆರೆ ಕಂಡದ್ದೇ ಈ ಎಲ್ಲ ಅನಾಹುತಗಳಿಗೆ ಕಾರಣವಾಯಿತು.
ಮೇ 3 ರಂದು ರಾಜ್ಯಕ್ಕೆ ಷಾ ಭೇಟಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
ಇದು ಉದ್ದೇಶ ಪೂರ್ವಕವಾಗಿ ನಡೆದದ್ದಲ್ಲ. ಅಮಿತಾಭ್ ಬಚ್ಚನ್ ಚಿತ್ರದ ರೀಲುಗಳು ಬಾರದಿರುವುದಕ್ಕೋ ಅಥವಾ ಬೇರೆ ಯಾವುದೋ ಕಾರಣಕ್ಕೋ ರಾಜ್ ಚಿತ್ರ ಆ ಥಿಯೇಟರ್’ನಲ್ಲಿ ತೆರೆ ಕಂಡದ್ದು ನಿಜ. ಗಲಾಟೆ, ದೊಂಬಿ ಶುರುವಾದದ್ದೇ ಇಲ್ಲಿಂದ..
ಇದನ್ನೆಲ್ಲ ಇಟ್ಟುಕೊಂಡು ‘ಚಿತ್ರದೀಪ’ ಪತ್ರಿಕೆ ಒಂದು ವರದಿಯನ್ನು ಪ್ರಕಟಿಸಿದ್ದೇ ತಡ ಕನ್ನಡದ ಹೋರಾಟಗಾರರಿಗೆ ಒಂದು ಪ್ರಬಲ ಅಸ್ತ್ರ ದೊರೆತಂತಾಯಿತು. ‘ಚಿತ್ರದೀಪ’ ಮಾರುಕಟ್ಟೆಗೆ ಹೋಯಿತು. ಅಲ್ಲೋಲ ಕಲ್ಲೋಲ. ಕರ್ನಾಟಕದಾದ್ಯಂತ ಹರಡಿಕೊಂಡಿದ್ದ ರಾಜ್ ಅಭಿಮಾನಿಗಳ ಸಂಘದ ಕಾರ್ಯಕರ್ತರು ರೊಚ್ಚಿಗೆದ್ದರು.
ತಮ್ಮ ‘ದೊರೆ’ಯನ್ನು ಈ ರೀತಿ ಹೀಯಾಳಿಸಲು ಆ ‘ಹಿಂದಿದೊರೆ’ಗೆ ಹೇಗಾದರೂ ಧೈರ್ಯ ಬಂತೋ ಎನ್ನುವ ಉದ್ವೇಗ. ಕ್ರಮೇಣ ಅಲ್ಲಲ್ಲಿ ಚಳುವಳಿಯ ರೂಪುರೇಷೆ ಕಾಣಿಸಿಕೊಂಡಿತು. ಕನ್ನಡ ಸಂಘಟನೆಗಳು ರಾಜ್ ಅಭಿಮಾನಿಗಳ ಸಂಘದ ಜೊತೆ ಕೈ ಜೋಡಿಸಿದುವು. ಆಗ ತಾನೇ ಗೋಕಾಕ್ ವರದಿ ಜಾರಿಯ ವಿಷಯದಲ್ಲಿ ಕರ್ನಾಟಕದಾದ್ಯಂತ ಕನ್ನಡದ ಕಹಳೆ ಊದಿದ ರಾಜ್ ಪರವಾಗಿ ಇಡೀ ಕರ್ನಾಟಕದ ಕನ್ನಡಿಗರು ಎದ್ದು ನಿಂತರು.
ರಾಜ್ಯದ ಜತೆಗೆ ಬಿಗ್ ಶಾಕ್ : ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ
ಅಮಿತಾಭ್ನ ಪೋಸ್ಟರ್’ಗಳಿಗೆ ಸೆಗಣಿ ಹಚ್ಚಲಾಯಿತು! ಬ್ಯಾನರ್ ಚಿಂದಿಯಾದುವು. ಚಿತ್ರಮಂದಿರಗಳಲ್ಲಿ ಅಮಿತಾಭ್ ಸಿನಿಮಾ ನಡೆಯದಂತೆ ತಡೆ ಹಿಡಿಯಲಾಯಿತು. ಎಲ್ಲೆಲ್ಲೂ ಅಮಿತಾಭ್ ವಿರುದ್ದದ ಕೂಗು ಮುಗಿಲು ಮುಟ್ಟಿತು. ಕ್ರಮೇಣ ಇದು ಹಿಂದಿ ಚಿತ್ರಗಳನ್ನು ಬ್ಯಾನ್ ಮಾಡುವ ಮಟ್ಟಕ್ಕೆ ಬಂದು ಮುಟ್ಟಿತು! ಅದರಲ್ಲೂ ಅಮಿತಾಭ್ನ ಚಿತ್ರಗಳು ಕರ್ನಾಟಕದ ಚಿತ್ರಮಂದಿರಗಳಲ್ಲಿ ತೆರೆ ಕಾಣದಂತೆ ತಡೆ ಹಿಡಿಯಲಾಯಿತು. ಕನ್ನಡ ಜನತೆ ಖಡಾಖಂಡಿತವಾಗಿ ಅಮಿತಾಭ್ನ ಚಿತ್ರಗಳ ಮೇಲೆ ಬ್ಯಾನ್ ಹೇರಿದರು.
ದಿನಪತ್ರಿಕೆಗಳಿಗೆ ಸುದ್ದಿಯ ಗ್ರಾಸ. ಕ್ರಮೇಣ ಈ ಗಲಾಟೆಯ ಬಿಸಿ ಹಿಂದಿ ಚಿತ್ರರಂಗಕ್ಕೆ ತಲುಪಿತು. ಎಲ್ಲರೂ ಜಾಗೃತರಾದರು. ಮೊದಲ ಹಂತವಾಗಿ ಅವರವರಲ್ಲೇ ಮಾತುಕತೆ ನಡೆಯಿತು. ನಂತರ ಅಮಿತಾಭ್ನನ್ನು ಖುದ್ದಾಗಿ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ವಿನಂತಿಸಿಕೊಳ್ಳಲಾಯಿತು.
ಆಗ ಎಂಟ್ರಿ ಕೊಟ್ಟದ್ದೇ ರಾಮನಾಥನ್!
ಈ ರಾಮನಾಥನ್ ಬೇರೆ ಯಾರೂ ಅಲ್ಲ, ‘ರಾಶಿ’ ಸೋದರರಲ್ಲಿ ಒಬ್ಬರು. ನಟ ಶರಪಂಜರ ಶಿವರಾಂ ಅವರ ಸೋದರ. ಆಗ ಹಿಂದಿ ಚಿತ್ರರಂಗದಲ್ಲಿ ಇವರದ್ದು ದೊಡ್ಡ ಹೆಸರು. ಅಮಿತಾಭ್ ಬಚ್ಚನ್ ಇವರಿಗೆ ಚೆಡ್ಡಿ ದೋಸ್ತ್ ಥರಾ! ನಿರ್ಮಾಪಕರಾಗಿ, ನಿರ್ದೇಶಕರಾಗಿ ಹಿಂದಿ ಚಿತ್ರರಂಗದ ಮನ ಗೆದ್ದಿರುವ ರಾಮನಾಥನ್ ತಮ್ಮ ‘ಬಾಂಬೆ ಟು ಗೋವಾ’ ಚಿತ್ರದ ಮೂಲಕ ಅಮಿತಾಭ್ನಿಗೊಂದು ಹೊಸ ಇಮೇಜ್ ಸೃಷ್ಟಿಸಿಕೊಟ್ಟಿದ್ದರು. ರಾಮನಾಥನ್ ಹೆಸರು ಕೇಳಿದರೆ ಸಾಕು ಅಮಿತಾಭ್ ಎದ್ದು ನಿಲ್ಲುತ್ತಿದ್ದ ಕಾಲವದು.
ನನ್ನ ತೋಳಿಗೆ ಭಾರತದ ಕೋವಿಡ್ ಲಸಿಕೆ ಹಾಕಲಾಗಿದೆ, ಭಾರತಕ್ಕೆ ಧನ್ಯವಾದ: ಬ್ರಿಟನ್ ಪ್ರಧಾನಿ
‘ಬಾಂಬೆ ಟು ಗೋವಾ’ ಹಿಂದಿ ಚಿತ್ರ ಸಿಲ್ವರ್ ಜೂಬಿಲಿ ಕಂಡಿತ್ತು. ರಾಮನಾಥನ್ ಅವರ ‘ಗಿರಫ್’ದಾರ್’ ಚಿತ್ರದಲ್ಲಿ ಸಂಜೀವ್ ಕುಮಾರ್, ಶಬನಾ ಆಜ್ಮಿ, ಡ್ಯಾನಿ ಪಾತ್ರವಹಿಸಿದ್ದರು. ಇದೇ ರಾಮನಾಥನ್ ನಿರ್ಮಿಸಿದ ‘ಗಂಗಾ ಜಮುನಾ ಸರಸ್ವತಿ’ ಚಿತ್ರದಲ್ಲಿ ಅಮಿತಾಭ್, ಮೀನಾಕ್ಷಿ ಶೇಷಾದ್ರಿ, ಮಿಥುನ್ ಚಕ್ರವರ್ತಿ, ಜಯಪ್ರದಾ ಮೊದಲಾದ ಅತಿರಥ ಮಹಾರಥರೆಲ್ಲಾ ನಟಿಸಿದ್ದರು.
ಇಂಥಾ ಪ್ರತಿಷ್ಠಿತ ನಿರ್ಮಾಪಕರೊಬ್ಬರು ಕನ್ನಡ ಮತ್ತು ಹಿಂದಿ ಚಿತ್ರರಂಗದ ರಾಯಭಾರಿಯಂತಿದ್ದುದರಿಂದ ಇವರನ್ನೇ ಈ ಭಾಷಾ ಸೂಕ್ಷ್ಮ ವಿಚಾರದ ಗೊಂದಲವನ್ನು ಶಮನಗೊಳಿಸಲು ಉಪಯೋಗಿಸಿಕೊಳ್ಳುವುದೆಂದು ಹಿಂದಿ ಚಿತ್ರರಂಗ ನಿರ್ಧರಿಸಿತು. ಇದು ಅಮಿತಾಭ್ಗೂ ಒಪ್ಪಿಗೆಯಾಯಿತು.
ರಾಜಕುಮಾರ್ ಕುಟುಂಬವನ್ನು ರಾಮನಾಥನ್ ಸಂಪರ್ಕಿಸಿದರು. ಹೀಗೆಲ್ಲಾ ನಡೆಯಬಾರದಿತ್ತು ಎಂದರು. ನಡೆದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ‘ಟ್ರೇಡ್ ಗೈಡ್’ಗೂ ಅಮಿತಾಭ್ಗೂ ಪರಸ್ಪರ ಸಂಬಂಧವೇ ಇಲ್ಲವೆಂದು ಒತ್ತಿ ಹೇಳಿದರು. ಕಣ್ತಪ್ಪಿನಿಂದಾದ ಅನಾಹುತಕ್ಕೆ ಅಮಿತಾಭ್ ಪರವಾಗಿ ಕ್ಷಮೆಯಾಚಿಸಿದರು. ಕೊನೆಯಲ್ಲಿ ಅಮಿತಾಭ್ ಬಚ್ಚನ್ ಡಾ. ರಾಜಕುಮಾರ್ ಅವರನ್ನು ಭೇಟಿ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದರು ಎನ್ನುವ ಸೂಕ್ಷ್ಮವನ್ನು ರಾಜ್ ಕುಟುಂಬಕ್ಕೆ ತಿಳಿಸಿದರು.
ಈ ಬಗ್ಗೆ ಒಂದು ದೊಡ್ಡ ಚರ್ಚೆಯೇ ನಡೆದು ಹೋಯಿತು. ರಾಮನಾಥನ್ ಅವರ ರಾಯಭಾರ ಕೆಲಸ ಯಶಸ್ವಿಯಾಯಿತು. ಅಮಿತಾಭ್ರನ್ನು ಭೇಟಿಯಾಗಲು ರಾಜ್ ಕುಟುಂಬ ಒಪ್ಪಿತು. ಈ ಧನ್ಯ ಮಿಲನ ನಡೆಯುವುದು ಬೆಂಗಳೂರಿನ ಅರಮನೆಯಲ್ಲಿ ಎಂದು ನಿಗದಿಯಾಯಿತು. ವಾರವೊಂದರಲ್ಲೇ ಅಮಿತಾಭ್ ವಿಮಾನದಲ್ಲಿ ಹಾರಿ ಬಂದು ಅರಮನೆ ಸೇರಿಕೊಂಡರು.
ಅದೇ ಹೊತ್ತಿಗೆ ರಾಜಕುಮಾರ್, ಪಾರ್ವತಮ್ಮ, ರಾಮನಾಥನ್ ಮತ್ತು ಅಮಿತಾಭ್ ಅವರ ಹಾರ್ಡ್ ಕೋರ್ ಫ್ಯಾನ್ ಆಗಿದ್ದ ಪುಟ್ಟ ಪುನೀತ್ ರಾಜಕುಮಾರ್ ಅಲ್ಲಿಗೆ ಬಂದು ಸೇರಿಕೊಂಡರು. ಕನ್ನಡದ ಕಂದ ರಾಜಕುಮಾರ್ ಮತ್ತು ಹಿಂದಿ ಬಾದ್ಷಾ ಅಮಿತಾಭ್ ಬಚ್ಚನ್ ಪರಸ್ಪರ ಕೈ ಕುಲುಕಿಕೊಂಡರು. ಹಾರ ಹಾಕಿಕೊಂಡರು. ಸಿಹಿ ಹಂಚಿ ತಿಂದರು. ಫೋಟೋ ಹೊಡೆಸಿಕೊಂಡರು. ಪುಟ್ಟ ಕಂದ ಪುನೀತನನ್ನು ಎತ್ತಿ ಮುದ್ದಾಡಿದರು ಅಮಿತಾಭ್!!!
ಕ್ರೆಡಿಟ್-ಡೆಬಿಟ್ ಕಾರ್ಡ್ ಕ್ಲೋಸ್ ಇನ್ನು ಸರಳ; ಜುಲೈ 1ರಿಂದ ಹೊಸ ನಿಯಮ
ಅಂದಹಾಗೆ, ಈಗಲೂ ನಡೆಯುತ್ತಿರುವುದೇನು? ಅದೇ ಭಾಷಾ ವೈಷಮ್ಯ, ಅದೇ ಗಡಿ ತಂಟೆ, ಅದೇ ಗಲಭೆ, ಅದೇ ಗೊಂದಲ. ಬದಲಾಗೋದು ಯಾವಾಗ? ಹಿಂದಿಯ ಅಜಯ್ ದೇವಗನ್ ಎಂಬ ನಟ ಸುಮ್ಮನೇ ಇರಲಾರದೇ ಮೈಮೇಲೆ ಇರುವೆ ಬಿಟ್ಟುಕೊಂಡಿದ್ದಾನೆ! ನಮ್ಮ ಅಭಿಮಾನದ ನಟ ಸುದೀಪ್ ಠಕ್ಕರ್ ಕೊಟ್ಟಿದ್ದಾರೆ. ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮುಂದೇನಾಗುವುದೋ ಕಾದು ನೋಡಬೇಕಾಗಿದೆ.
ಕೊನೆಯಲ್ಲಿ ಒಂದು ಪುಟ್ಟ ಮಾಹಿತಿ ನಿಮಗಾಗಿ : ಅಂದು ‘ಚಿತ್ರದೀಪ’ ಪತ್ರಿಕೆಯಲ್ಲಿ ‘ಟ್ರೇಡ್ ಗೈಡ್’ ಪತ್ರಿಕೆಯ ಸ್ಫೋಟಕ ಸುದ್ದಿಯನ್ನು ಕನ್ನಡಕ್ಕೆ ಅನುವಾದ ಮಾಡಿ ಪ್ರಕಟಿಸಿದ್ದು ಬೇರೆ ಯಾರೂ ಅಲ್ಲ, ಅಂದಿನ ಯುವ ಪತ್ರಕರ್ತರಾದ ಮತ್ತು ಇಂದಿನ ಹಿರಿಯ ಪತ್ರಕರ್ತರಾದ ಗಣೇಶ್ ಕಾಸರಗೋಡು ಹಾಗೂ ಬಿ.ಎನ್.ಸುಬ್ರಹ್ಮಣ್ಯ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ