ಬೆಂಗಳೂರು:
ಇತೀಚಿಗಷ್ಟೇ 6-12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್, 5-12 ವಯಸ್ಸಿನವರಿಗೆ ಕಾರ್ಬೆವ್ಯಾಕ್ಸ್, 12+ ಮಕ್ಕಳಿಗೆ ಝೈಕೋವ್ ತುರ್ತು ಬಳಕೆಗೆ ಡಿಸಿಜಿಐ ಅನುಮೋದಿಸಿತ್ತು. ಈ ಬಳಿಕ 12-17 ವಯೋಮಾನದವರಿಗೆ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವೊವ್ಯಾಕ್ಸ್ಗೆ ಎನ್ಟಿಎಜಿಐ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣ; ನಿಮಗೆ ಗೊತ್ತಿರಬೇಕಾದ ಸಂಗತಿಗಳಿವು
ಈ ಸಂಬಂಧ ಕೇಂದ್ರ ಸರ್ಕಾರದ ತಜ್ಞರ ಸಮಿತಿಯು ಶಿಫಾರಸ್ಸು ಮಾಡಿತ್ತು. 12-17 ವರ್ಷ ವಯಸ್ಸಿನ ಮಕ್ಕಳಿಗೆ ಸೀರಮ್ ಇನ್ಸ್ಟಿಟ್ಯೂಟ್ನ ಕೋವೊವ್ಯಾಕ್ಸ್ ಕೋವಿಡ್ ಲಸಿಕೆಗೆ ಶಿಫಾರಸು ಮಾಡಿದಕ್ಕೆ NTAGI ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಕೆಲವೇ ದಿನಗಳಲ್ಲಿ 12-17 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
