ನವದೆಹಲಿ:
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,688 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 50 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಏಪ್ರಿಲ್ 30) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,75,864ಕ್ಕೆ ಏರಿಕೆಯಾಗಿದೆ.ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 18,684ಕ್ಕೆ ತಲುಪಿದೆ ಎಂದು ಸಚಿವಾಲಯದ ಅಂಕಿಅಂಶದಲ್ಲಿ ಹೇಳಿದೆ.
ಇಂದು ಸೂರ್ಯಗ್ರಹಣ ಈ ರಾಶಿಗಳ ನಸೀಬು ಫಳ ಫಳ ಹೊಳೆಯುತ್ತದಂತೆ! ನಿಮ್ಮ ರಾಶಿ ಇದೆಯಾ?
ಒಂದೇ ದಿನದಲ್ಲಿ 2,755 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,33,377ಕ್ಕೆ ಏರಿಕೆಯಾಗಿದೆ.24ಗಂಟೆಯಲ್ಲಿ 883 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.74ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.74ರಷ್ಟಿದೆ. ಅಲ್ಲದೇ ವಾರದ ಪಾಸಿಟಿವಿಟಿ ದರ ಶೇ.066ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ