ಸನ್ಯಾಸ ದೀಕ್ಷೆ ಸ್ವೀಕರಿಸಿದ ಮಾಜಿ ಸಚಿವ! ಪುಟ್ಟಸ್ವಾಮಿ ಇನ್ಮುಂದೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು

ಬೆಂಗಳೂರು:

 ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಅವರು ಶುಕ್ರವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಜಯೇಂದ್ರಪುರಿ ಮಹಾಸ್ವಾಮಿಗಳು ಸನ್ಯಾಸ ಧೀಕ್ಷೆ ನೀಡಿದರು.

ಹಿಂದಿಯಲ್ಲಿ 400 ಕೋಟಿ ರೂ. ಬಾಚಿದ ‘ಕೆಜಿಎಫ್​ 2’; ವಿಶ್ವಾದ್ಯಂತ ಯಶ್​ ಚಿತ್ರ ಗಳಿಸಿದ್ದು 1100 ಪ್ಲಸ್​ ಕೋಟಿ

ಮೇ 8ರಂದು ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ತೆರಳಲಿದ್ದು, ಮೇ 15ರಂದು ಪ್ರಥಮ ಪೀಠಾಧಿಪತಿಯಾಗಿ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು ಅಲಂಕೃತಗೊಳ್ಳಿಲಿದ್ದಾರೆ. ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,

ರಾಜ್ಯದಲ್ಲಿ ಕೋವಿಡ್​ ಹೆಚ್ಚಳ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಿಎಂ ಎಸ್​.ಎಂ. ಕೃಷ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಸೇರಿ ಹಲವು ಸಚಿವರು ಭಾಗವಹಿಸಲಿದ್ದಾರೆ. 20 ಮಠಾಧೀಶರು ದಿವ್ಯ ಸಾನಿಧ್ಯ ವಹಿಸಿಲಿದ್ದಾರೆ.

ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್

ಬಿ.ಜೆ.ಪುಟ್ಟಸ್ವಾಮಿ ಅವರು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಏ.30ರಂದು ರಾಜೀನಾಮೆ ನೀಡಿದ್ದರು. ನಾನು ಸಮಾಜ ಸುಧಾರಣಾ ಸ್ವಾಮೀಜಿಯಾಗಿ ದೀಕ್ಷೆ ಪಡೆಯುವೆ ಎಂದು ಈ ಹಿಂದೆ ಹೇಳಿದ್ದರು.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link