ಬೆಂಗಳೂರು:

ಬೆಂಗಳೂರು, ಮೇ 07 ಯಾರು ಏನು ಹೇಳಿಕೆ ಕೊಡುತ್ತಾರೋ ಆ ಹೇಳಿಕೆಗಳಿಗೆ ಅವರೇ ಜವಾಬ್ದಾರರು ಹಾಗೂ ಅವರ ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಅವರ ಕರ್ತವ್ಯ ಕೂಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ಯಾರು ಏನು ಹೇಳಿಕೆ ನೀಡುತ್ತಾರೋ ಅದಕ್ಕೆ ಬದ್ಧವಾಗಿ ದಾಖಲೆಗಳನ್ನು ನೀಡಲಿ. ತನಿಖೆಗೆ ಅದನ್ನು ಅಳವಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ಹಿಂದಿಯಲ್ಲಿ 400 ಕೋಟಿ ರೂ. ಬಾಚಿದ ‘ಕೆಜಿಎಫ್ 2’; ವಿಶ್ವಾದ್ಯಂತ ಯಶ್ ಚಿತ್ರ ಗಳಿಸಿದ್ದು 1100 ಪ್ಲಸ್ ಕೋಟಿ
ಪಿ.ಎಸ್.ಐ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ದಾಖಲೆಗಳನ್ನು ಒದಗಿಸಿದರೆ ತನಿಖೆಗೆ ಒಳಪಡಿಸುತ್ತೇವೆ ಎಂದರು.
ಖರ್ಗೆಯವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲಪ್ರಿಯಾಂಕ ಖರ್ಗೆ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಖರ್ಗೆ ಮೂಲ ಕಾಂಗ್ರೆಸ್ಸಿಗರು. ಅವರಿಗೆ ಇದೆಲ್ಲಾ ಕರಗತ ಆಗಿದೆ. ಖರ್ಗೆಯವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ
ಬಿಜೆಪಿ ಪರವಾದ ಅಲೆ ರಾಜ್ಯದಲ್ಲಿ ಬಿ.ಜೆ.ಪಿ ಪರವಾದ ಅಲೆ ಇದೆ. ಅದರ ಪ್ರಭಾವದಿಂದ ಹಲವಾರು ಕ್ಷೇತ್ರಗಳಲ್ಲಿ ಪ್ರಥಮ ಬಾರಿಗೆ ವಿಜಯವನ್ನು ಸಾಧಿಸುವ ಅವಕಾಶಗಳು ಸಿಕ್ಕಿವೆ. ಪಕ್ಷದ ಸಿದ್ದಾಂತ ವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕೆಲಸ ನಡೆಯುತ್ತಿದೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಜನ ಬಿಜೆಪಿ ಸೇರಲಿದ್ದಾರೆ.
ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್
ಯಾರನ್ನು ಪಕ್ಷಕಗಕೆ ಸೇರಿಸಿಕೊಳ್ಳಬೇಕು ಎಂಬುದನ್ನು ಪಕ್ಷದ ಜಿಲ್ಲಾ ಮತ್ತು ರಾಜ್ಯ ಘಟಕ ನೋಡಿಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಕೆಪಿಸಿಸಿ ಅಧ್ಯಕ್ಷ ಹಾಗೂ ಸಂಸದ ಡಿಕೆ ಸುರೇಶ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ,ಸಂತ್ರಸ್ತರು ದೂರು ನೀಡಿದರೆ ತನಿಖೆ ಯಾಗುತ್ತದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








