ವಿದ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ಬಂದು ಅಕ್ರಮ ಚಟುವಟಿಕೆಗಳಲ್ಲಿ ಭಾಗಿ
ಬೆಂಗಳೂರು : ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ನೈಜೇರಿಯಾ ದೇಶದ ಇಬ್ಬರು ವ್ಯಕ್ತಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಂದಾಜು 8 ಲಕ್ಷ ಬೆಲೆ ಬಾಳುವ ನಿಷೇಧಿತ ವಸ್ತುವಾದ 80 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, ಕೃತ್ಯಕ್ಕೆ ಬಳಸಲಾಗುತ್ತಿದ್ದ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ
ಬೆಂಗಳೂರಿನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ನೈಜೇರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ವಶಕ್ಕೆ ಪಡೆದು ಆತನಿಂದ 80 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, ಒಂದು ಮೊಬೈಲ್ ಫೋನ್ ಗಳು, ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 8 ಲಕ್ಷ ರೂ ಗಳಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ವಿದ್ಯಾಭ್ಯಾಸಕ್ಕಾಗಿ ಬಂದಿದ್ದರು : ಮೂಲತಃ ನೈಜೇರಿ ದೇಶದವರಾಗಿದ್ದ ಆರೋಪಿಗಳು 5 ವರ್ಷಗಳ ಹಿಂದೆ ವಿಧ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ವ್ಯಾಸಂಗ ಮಾಡಲು ಬಂದಿದ್ದಾರೆ, ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ದುರುದ್ದೇಶದಿಂದ ಬೆಂಗಳೂರಿನಲ್ಲಿ ನೆಲೆಸಿರುವ ಆಫ್ರಿಕಾ ಮೂಲದ ಪರಿಚಯಸ್ಥ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟಲ್ ಅನ್ನು ಖರೀದಿ ಮಾಡಿ ಒಂದು ಗ್ರಾಂ ಗೆ 5 ಸಾವಿರದಿಂದ 6 ಸಾವಿರ ರೂಗಳಂತೆ ಹೆಚ್ಚಿನ ಬೆಲೆಗೆ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ ಎಂದಿದ್ದಾರೆ.
ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ : ಆರೋಪಿಯು ಮಾದಕ ವಸ್ತುಗಳ ಮಾರಾಟ/ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದರಿಂದ ಬಂಧಿತ ಆರೋಪಿಯ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ1985 ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ. ಈ ಕಾರ್ಯಾಚರಣೆಯನ್ನು ಸಿ.ಸಿ.ಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಯಶಸ್ವಿಯಾಗಿ ಮಾಡಿದ್ದಾ