ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಂಡಿಗಡದಲ್ಲಿ ನಡೆಯುತ್ತಿರುವ 47ನೇ ಜಿ ಎಸ್ ಟಿ ಮಂಡಳಿ ಎರಡನೇ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆ ಆರಂಭಕ್ಕೂ ಮುನ್ನ ಹಲವು ರಾಜ್ಯಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತುಕತೆ ನಡೆಸಿದರು. ಮೇಘಾಲಯ ರಾಜ್ಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಗೋವಾ ಹಣಕಾಸು ಸಚಿವರು, ಬಿಹಾರ ರಾಜ್ಯದ ಉಪ ಮುಖ್ಯಮಂತ್ರಿಗಳ ಜತೆ ಅವರು ಸಮಾಲೋಚನೆ ನಡೆಸಿದರು.