ಬೆಂಗಳೂರು : ಆಗಸ್ಟ್ ತಿಂಗಳ ಮೊದಲ ವಾರ ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗೆ ಆ.6 ಶನಿವಾರದವರೆಗೂ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ (11ರಿಂದ 20 ಸೆಂ.ಮೀ) ನೀಡಲಾಗಿದೆ.