ಪುಸ್ತಕ ಓದಿ ಅರ್ಥಶಾಸ್ತ್ರ ಹೇಳಬೇಡಿ, ವಾಸ್ತವ ನೋಡಿ ಅರ್ಥಶಾಸ್ತ್ರ ಹೇಳಿ : ಅಮಿತ್ ಶಾ
ಬೆಂಗಳೂರು : ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪೆÇ್ರೀತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.
ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ಬೆಂಗಳೂರು ನಗರದಲ್ಲಿ ಹೊರತುಪಡಿಸಿದರೆ, ಪ್ರಪಂಚದ ಯಾವುದೇ ನಗರಗಳಲ್ಲಿ ಈ ಸಂಖ್ಯೆಯ ಆರ್ ಎಂಡ್ ಡಿ ಕೇಂದ್ರಗಳನ್ನು ಕಾಣಲು ಸಾಧ್ಯವಿಲ್ಲ ಎಂದರು.
ಕರ್ನಾಟಕದ ಅಭಿವೃದ್ಧಿಯಲ್ಲಿ ಕೈಗಾರಿಕೆಗಳ ಕೊಡುಗೆ :
ರಾಜ್ಯದಲ್ಲಿ ಉದ್ಯೋಗ ನೀತಿಯನ್ನು ರೂಪಿಸಲಾಗಿದ್ದು, ಉದ್ಯೋಗದಾತ ಉದ್ಯಮಿಗಳಿಗೆ ಪೆÇ್ರೀತ್ಸಾಹಕಗಳನ್ನು ನೀಡಲಾಗುವುದು. ಸೆಮಿಕಂಡಕ್ಟರ್ ನೀತಿ, ವಿದ್ಯುತ್ ಚಾಲಿತ ವಾಹನ ನೀತಿ, ನವೀಕರಿಸಬಹುದ ಇಂಧನ ನೀತಿಗಳನ್ನು ರೂಪಿಸಲಾಗಿದೆ. ಈ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯಕ್ಕೆ 110 ಲಕ್ಷ ಕೋಟಿ ರೂ.ಗಳ ವಿದೇಶಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೈಡ್ರೋಜನ್ ಇಂಧನ, ಸಮುದ್ರನೀರಿನಿಂದ ಅಮೋನಿಯಾ ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ. ಕರ್ನಾಟಕದ ಅಭಿವೃದ್ಧಿಯಲ್ಲಿ ಕೈಗಾರಿಕೆಗಳ ಕೊಡುಗೆಗೆ ಮನ್ನಣೆ ನೀಡಲಾಗುತ್ತಿದೆ. ಭಾರತದಲ್ಲಿ ಅಮೃತ ಕಾಲವನ್ನು ಸ್ಥಾಪಿಸುವ ಕೆಲಸನವನ್ನು ಎಲ್ಲರೂ ಒಗ್ಗಟ್ಟಾಗಿ ಮಾಡಬೇಕಿದೆ ಎಂದರು.
ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ರಾಜ್ಯದ ಕೊಡುಗೆ :
ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ರಾಜಮಹಾರಾಜರ ಕಾಲದಿಂದಲೂ ಪ್ರಗತಿಪರ ಅಭಿವೃದ್ಧಿ, ಆರೋಗ್ಯ, ಶಿಕ್ಷಣ, ವಾಣಿಜ್ಯ, ತಂತ್ರಜ್ಞಾನದ ಬೆಳವಣಿಗೆಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ.ಕರ್ನಾಟಕ ಐಟಿಬಿಟಿ, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಪಾಶ್ಚಿಮಾತ್ಯ ರಾಷ್ಟ್ರಗಳನ್ನು ಹಿಂದಿಕ್ಕುತ್ತಿದೆ. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ 1 ಟ್ರಿಲಿಯನ್ ಡಾಲರ್’ನಷ್ಟು ಕೊಡುಗೆ ನೀಡಬೇಕೆನ್ನುವ ಗುರಿ ಇದೆ. ಇದಕ್ಕಾಗಿ ವಲಯವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಕೃಷಿಯಿಂದ ಆಹಾರ ಭದ್ರತೆಯ ಜೊತೆಗೆ ಆರ್ಥಿಕ ಭದ್ರತೆ :
ಕರ್ನಾಟಕ ಕೃಷಿ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಕಂಡಿದೆ. 10 ಕೃಷಿ ಹವಾಮಾನ ವಲಯಗಳು ರಾಜ್ಯದಲ್ಲಿದ್ದು, ವರ್ಷಪೂರ್ತಿ ಕೃಷಿ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಕೃಷಿ ವಲಯದ ಶೇ.1ರಷ್ಟು ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದಲ್ಲಿ ಶೇ. 4ರಷ್ಟು ಹಾಗೂ ಸೇವಾ ವಲಯದಲ್ಲಿ ಶೇ. 10 ರಷ್ಟು ಅಭಿವೃದ್ಧಿಗೆ ಕಾರಣವಾಗುತ್ತದೆ. ಆಹಾರ ಕ್ಷೇತ್ರ ಆಹಾರ ಭದ್ರತೆಯ ಜೊತೆಗೆ ಆರ್ಥಿಕ ಭದ್ರತೆಯನ್ನೂ ಕೊಡುವುದರಿಂದ ಉದ್ಯಮಿಗಳು ಆಹಾರ ಕ್ಷೇತ್ರದತ್ತ ಗಮನಹರಿಸಬೇಕು. ಆಹಾರ ಮತ್ತು ಸೇವಾ ವಲಯದ ಸಂಪರ್ಕ ಗಟ್ಟಿಗೊಳ್ಳಬೇಕು. ಇದಕ್ಕೆ ಪೂರಕವಾದ ನೀತಿಗಳನ್ನೂ ರೂಪಿಸಲಾಗಿದೆ. ಪ್ರಧಾನಿಗಳ ಆಶಯವಾದ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಕಾರವಾದಾಗ, ರೈತರ ಆದಾಯವೂ ದುಪ್ಪಟ್ಟಾಗುತ್ತದೆ. ಆಗ ಶೇ. 60 ಪ್ರತಿಶತ ಕೃಷಿಯನ್ನೇ ನಂಬಿರುವ ಜನರ ಜೀವನ ಸುಧಾರಣೆ ಸಾಧ್ಯ. ತಳಮಟ್ಟದ ಶ್ರಮಿಕರೇ ಆರ್ಥಿಕತೆಯ ಬೆನ್ನೆಲುಬಾಗಿದ್ದಾರೆ. ಮುಂದಿನ 25 ವರ್ಷಗಳ ಅಮೃತಕಾಲದಲ್ಲಿ ಶ್ರಮಿಕ ವರ್ಗದ ಅಭಿವೃದ್ಧಿಯನ್ನು ಗುರಿಯಾಗಿಸಿಕೊಳ್ಳಬೇಕಿದೆ ಎಂದರು.
ಭಾರತೀಯರಲ್ಲಿ ಆತ್ಮವಿಶ್ವಾಸ ತುಂಬಿಸಿದ ಆತ್ಮನಿರ್ಭರ ಭಾರತ :
ಒಂದು ದೇಶ 75 ವರ್ಷಗಳಲ್ಲಿ ಅಗಾಧ ಅನುಭವವನ್ನು ಹೊಂದಿರುತ್ತದೆ. ಅನೇಕ ಏಳುಬೀಳುಗಳನ್ನು ಕಂಡಿದೆ. ಪ್ರಜಾಪ್ರಭುತ್ವಕ್ಕೆ ಹಾಕಲಾಗಿದ್ದ ಸವಾಲುಗಳನ್ನು ದೇಶದ ಜನರ ನೈತಿಕ ಶಕ್ತಿಯಿಂದ ಎದುರಿಸಲಾಯಿತು. ಮೇಕ್ ಇನ್ ಇಂಡಿಯಾ ನೀತಿ ಭಾರತವನ್ನು ಸದೃಢವಾಗಿಸಿತು. ಆತ್ಮನಿರ್ಭರ ಮಂತ್ರದಿಂದ ದೇಶದ ಜನರ ಆತ್ಮವಿಶ್ವಾಸ ಹೆಚ್ಚಿತು. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬ ನಾಗರಿಕರಲ್ಲಿ ಆತ್ಮವಿಶ್ವಾಸವನ್ನು ತುಂಬಿದರು. ದೇಶದ ಕಟ್ಟಕಡೆಯ ವ್ಯಕ್ತಿಯ ಆಶಾಭಾವವೇ ಈ ದೇಶದ ಶಕ್ತಿ. ಕಟ್ಟಕಡೆಯ ವ್ಯಕ್ತಿ ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಮೂಲಕ ದೇಶದ ಭವಿಷ್ಯವಾಗುತ್ತಾನೆ. ಈ ನೀತಿಯನ್ನೇ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬಿಂಬಿಸುತ್ತದೆ. ದೂರದೃಷ್ಟಿಯ , ಶಕ್ತಿಯುತ ನಾಯಕ ಬೇಕಾಗುತ್ತದೆ. ಈ ಗುಣಗಳನ್ನು ನಾವು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರಲ್ಲಿ ಕಾಣಬಹುದಾಗಿದೆ ಎಂದು ತಿಳಿಸಿದರು.
ಆತ್ಮನಿರ್ಭರ ಭಾರತ ಹಾಗೂ ಮೇಕ್ ಇನ್ ಇಂಡಿಯಾ ಮೂಲಕ ಭಾರತದ ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ 25 ವರ್ಷಗಳಲ್ಲಿ ಭಾರತದ ಅಭಿವೃದ್ಧಿ ನಕ್ಷೆ ಸಿದ್ಧಪಡಿಸಿಕೊಂಡಿದ್ದೇವೆ, ಸ್ವಾತಂತ್ರದ ಅಮೃತ್ ಮಹೋತ್ಸವ ಮಾಡುವ ಉದ್ದೇಶ ನಮ್ಮ ಚಿಕ್ಕ ಮಕ್ಕಳಿಗೆ ದೇಶದ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿಯಬೇಕು, 75 ವರ್ಷದಲ್ಲಿ ನಮ್ಮ ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಆಗಿರುವ ಕ್ರಾಂತಿಕಾರಿ ಅಭಿವೃದ್ಧಿಯ ಬಗ್ಗೆ ವಿಶ್ವಕ್ಕೆ ತಿಳಿಸುವ ಕೆಲಸ ಮಾಡಬೇಕು. ಮೂರನೇಯದು 75 ನೇ ವರ್ಷದಲ್ಲಿ ಸಂಕಲ್ಪ ಮಾಡಬೇಕು ಸ್ವಾತಂತ್ರೋತ್ಸವದ ಶತಾಬ್ಲಿಯನ್ನು ಭಾರತ ಮುಂಚೂಣಿ ರಾಷ್ಟ್ರವಾಗಿ ನಿಲ್ಲಬೇಕು. ಈ ದೇಶವನ್ನು ಅಭಿವೃದ್ಧಿ ಪಡಿಸಲು ಅನೇಕ ಪ್ರಧಾನಿಗಳು ಒಂದಲ್ಲೊಂದು ರೀತಿ ಶ್ರಮ ವಹಿಸಿದ್ದಾರೆ. ಪ್ರಧಾನಿ ಮೋದಿ ಬಂದ ನಂತರ ದೇಶದ ಸರ್ವ ಸ್ಪರ್ಶಿ ಅಭಿವೃದ್ಧಿ ಮಾಡಿದ್ದಾರೆ . ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ಹೇಳುವಂತಿಲ್ಲ. ಸರ್ವ ಸಮುದಾಯಗಳ ಅಭಿವೃದ್ಧಿ ಮಾಡಿದ್ದಾರೆ. ನಾವು ಎನ್ ಇಪಿ, ಆರೋಗ್ಯ ನೀತಿ, ಎಲೆಕ್ಟ್ರಾನಿಕ್ಸ್ ನೀತಿ, ಡಿಜಿಟಲ್ ಇಂಡಿಯಾ, ಉಡಾನ್, ಗ್ರೀನ್ ಇಂಡಿಯಾ, ಸ್ವಚ್ಛ ಭಾರತ ಭಾರತ ಅಭಿಯಾನ ಮಾಡಿದೆವು. ಅದರ ಪರಿಣಾಮ ಸ್ವಸ್ತ ಭಾರತ ನಿರ್ಮಾಣ ಮಾಡಲು ಸಾಧ್ಯವಾಯಿತು. ಭಾರತವನ್ನು ಉತ್ಪಾದನಾ ಹಬ್ ಮಾಡಲು ಯೋಜನೆ ರೂಪಿಸಲಾಗುತ್ತಿದೆ. 2014 ಕ್ಕೆ ಮುಂಚೆ ಪ್ರತಿ ದಿನ ಪತ್ರಿಕೆಗಳಲ್ಲಿ ಭ್ರಷ್ಟಾಚಾರದ ಸುದ್ದಿ ಮುಖ ಪುಟದಲ್ಲಿ ರಾರಾಜಿಸುತ್ತಿತ್ತು. ಹಿಂದಿನ ಅವಧಿಯಲ್ಲಿ ಪ್ರಧಾನ ಮಂತ್ರಿಯನ್ನು ದೇಶದಲ್ಲಿ ಯಾರು ಪ್ರಧಾನಿ ಎಂದು ಪರಿಗಣಿಸಿರಲಿಲ್ಲ. ಎಲ್ಲ ಮಂತ್ರಿಗಳು ತಮ್ಮನ್ನು ತಾವೇ ಪ್ರಧಾನ ಮಂತ್ರಿ ಎಂದುಕೊಂಡಿದ್ದರು. ಈಗ ಪ್ರಧಾನಿಯ ಬಗ್ಗೆ ವಿಶ್ವವೇ ಮಾತನಾಡುತ್ತಿದೆ.
– ಅಮಿತ್ ಶಾ, ಕೇಂದ್ರ ಕೃಹ ಸಚಿವ.
ಪುಸ್ತಕ ಓದಿ ಅರ್ಥಶಾಸ್ತ್ರ ಹೇಳಬೇಡಿ, ವಾಸ್ತವ ನೋಡಿ ಅರ್ಥಶಾಸ್ತ್ರ ಹೇಳಬೇಕು. ಪ್ರತಿ ಮನೆಗೆ ನೀರು ಬಂದರೆ, ವಿದ್ಯುತ್ ಬಂದರೆ ಜಿಡಿಪಿ ಅಭಿವೃದ್ಧಿ ಯಾಗುವುದಿಲ್ಲವೇ, ಅದನ್ನು ಪುಸ್ತಕದಲ್ಲಿ ಬರೆದಿಲ್ಲ ಎಂದು ಚಿಂತಿಸಬೇಡಿ, ನಾವು ಜಿಡಿಪಿಯನ್ನು ಸುಸ್ಥಿತಿಯಲ್ಲಿ ಇಟ್ಟಿದ್ದೇವೆ. ಉದ್ಯಮಗಳು ಸ್ಕೆಲ್ ಬದಲಾಯಿಸಬೇಕಿದೆ. ಆರ್ ಆಂಡ್ ಡಿ ಕಡೆಗೆ ಹೆಚ್ಚಿನ ಗಮನ ಹರಿಸಬೆಕಿದೆ. ದೇಶದ ವ್ಯಾಪ್ತಿಯಲ್ಲಿ ಆರ್ ಎಂಡ್ ಮಾಡಬೇಕು. ಸ್ಟಾರ್ಟ್ ಅಪ್ ಗಳು ಮತ್ತು ಉದ್ಯಮಗಳ ನಡುವೆ ಜೋಡಣೆ ಮಾಡಿ ಅಭಿವೃದ್ಧಿಯಾಗಬೇಕು. ಉದ್ಯಮಗಳು ಕಚ್ಚಾ ವಸ್ತುವಿನಿಂದ ಹಿಡಿದು ಉತ್ಪಾದನೆಯಾದ ವಸ್ತುವನ್ನು ಮಾಡುವವರೆಗೂ ಎಲ್ಲವೂ ಆತ್ಮನಿರ್ಭರವಾಗಬೇಕು. ಉದ್ಯಮ ಪ್ರತ್ಯೇಕವಾಗಿ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ದೇಶದ ಜನರ ಜೊತೆಗೆ ಅಭಿವೃದ್ಧಿ ಮಾಡುವುದು ನಮ್ಮ ಉದ್ದೇಶವಾಗಿದೆ. ದೇಶದ ಅಭಿವೃದ್ಧಿಯಲ್ಲಿ ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿಕೊಂಡರು.
ಸಮಾರಂಭದಲ್ಲಿ ಕೇಂದ್ರ ಸಂಸ್ಕøತಿ ಸಚಿವ ಕಿಶನ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಚಿವ ಮುರುಗೇಶ ನಿರಾಣಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಉಪಸ್ಥಿತರಿದ್ದರು.