ನಾಳೆ ಗೋವಿಂದರಾಜನಗರದಲ್ಲಿ ಕನಕ ಭವನ ಉದ್ಘಾಟನೆ : ಸಚಿವ ವಿ ಸೋಮಣ್ಣ

ಬೆಂಗಳೂರು : ಆಗಸ್ಟ್ 21ರಂದು ಸಂಜೆ 5ಗಂಟೆಗೆ ನಾಗರಭಾವಿ ವಾರ್ಡಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ “ಕನಕ ಭವನ” ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆ ಅಡಿಯಲ್ಲಿ ಸರ್ಕಾರದ ಅನುದಾನ ಬಳಸಿಕೊಂಡು ಕನಕ ಸಮುದಾಯ ಭವನ ನಿರ್ಮಾಣಮಾಡಲಾಗಿದೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 1ಎಕರೆ 14 ಗುಂಟೆ ವಿಸ್ತೀರ್ಣದಲ್ಲಿ 12 ಕೋಟಿ ವೆಚ್ಚದಲ್ಲಿ ಕನಕಭವನ ನಿರ್ಮಿಸಲಾಗಿದೆ ಎಂದರು. ಹಿಂದುಳಿದ ವರ್ಗಗಗಳಿಗೆ ಸೇರಿದ 250 ಅಭ್ಯರ್ಥಿಗಳಿಗೆ ಈ ಕಟ್ಟಡದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಆರಂಭಿಸಲಾಗುವುದು. ಅದಕ್ಕಾಗಿ 4 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗುವುದು ಎಂದು ತಿಳಿಸಿದರು.

ಅತ್ಯಾಧುನಿಕ ಕಟ್ಟಡವನ್ನು ನಿರ್ಮಿಸಲಾಗಿದ್ದು ವಿವಿಧ ಕಟ್ಟಡಗಳ ಉದ್ಘಾಟನೆ ನಡೆಯಲಿದೆ. ಚಂದ್ರಾಲೇಔಟ್ ವಾರ್ಡಿನಲ್ಲಿ ನಿರ್ಮಿಸಿರುವ “ಪ್ರಾಥಮಿಕ ಆರೋಗ್ಯ ಕೇಂದ್ರ” ಪಂತರಪಾಳ್ಯ ವಾರ್ಡಿನಲ್ಲಿ ವಾರ್ಡ್ ಕಚೇರಿ, ಅಗ್ರಹಾರದ ದಾಸರಹಳ್ಳಿ ವಾರ್ಡಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಚಂದ್ರಾಲೇಔಟಿನ ವಸತಿ ನಿಲಯ ಕಟ್ಟಡವಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಹಾಗೂ ಹೊಸದುರ್ಗ ಪೀಠದ ಈಶ್ವರಾನಂದಪುರಿ ಶ್ರೀಗಳ ಸಾನಿದ್ಯ ವಹಿಸಲಿದ್ದಾರೆ.

ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, ಕೋಟ ಶ್ರೀನಿವಾಸ ಪೂಜಾರಿ, ಬೈರತಿ ಬಸವರಾಜ, ಮುನಿರತ್ನ, ಗೋಪಾಲಯ್ಯ, ಸಂಸದ ತೇಜಸ್ವಿ ಸೂರ್ಯ ಹಾಗೂ ಮಾಜಿ ಸಚಿವ ಎಚ್,ಎಂ ರೇವಣ್ಣ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Recent Articles

spot_img

Related Stories

Share via
Copy link