ಬೆಂಗಳೂರು
ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದಾರೆ ಎನ್ನಲಾಗಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀ ಸಿದ್ದರಾಮಯ್ಯ ಅವರು ಅದು ನಕಲಿ ಪತ್ರವಾಗಿದ್ದು ಆ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
A fake & forged letter with my name on the letterhead is being circulated with a mala fide intension of creating confusion among people, @INCKarnataka party workers & leaders.
Disturbed by their falling electoral prospects, @BJP4Karnataka has stooped low like their high command. pic.twitter.com/kqYy8PaufY
— Siddaramaiah (@siddaramaiah) February 2, 2023
ಈ ಕುರಿತಾಗಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ.ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.








