ಮಗಳು ಐಶ್ವರ್ಯಗೆ ಸಿಬಿಐ ನೋಟೀಸ್
ಬೆಂಗಳೂರು
ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಇಡಿ ಕಂಟಕ ಶುರುವಾಗಿದೆ. ಫೆಬ್ರವರಿ 22 ರಂದು ಅವರ ಇಡಿ ಮುಂದೆ ಹಾಜರಾಗಲು ಶಿವಕುಮಾರ್ ಅವರಿಗೆ ನೋಟಿಸ್ ನೀಡಲಾಗಿದೆ.
ಮಗಳ ಮಾಲೀಕತ್ವದ ಶಾಲೆಯ ಶುಲ್ಕ ಮತ್ತು ಪರೀಕ್ಷೆಯ ಫಲಿತಾಂಶಗಳ ಬಗ್ಗೆ ವಿಚಾರಣೆ ನಡೆಸಲು ಸಿಬಿಐ ನೋಟಿಸ್ ನೀಡಿದೆ. ಈ ಕುರಿತು ಸ್ವತಃ ಡಿಕೆ ಶಿವಕುಮಾರ್ ಅವರೇ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಶಿವಕುಮಾರ್ ಅವರು ಕಾಂಗ್ರೆಸ್ನ ‘ಪ್ರಜಾಧ್ವನಿ’ ಯಾತ್ರೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ಸಂದರ್ಭದಲ್ಲಿ ಇಡಿ ವಿಚಾರಣೆಗೆ ಕರೆದಿರುವುದು ಅವರಿಗೆ ಮತ್ತಷ್ಟು ಸಂಕಷ್ಟವನ್ನು ತಂದೊಡ್ಡಿದೆ.
ಜುಲೈ, 2017 ರಲ್ಲಿ ಡಿಕೆ ಶಿವಕುಮಾರ್ ಮತ್ತು ಅವರ ಮಗಳು ಹಣಕಾಸಿನ ಹೂಡಿಕೆಗಾಗಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ಆರೋಪಿಸಲಾಗಿದೆ. ಡಿಕೆಶಿಗೆ ಸಂಬಂಧಿಸಿದ 429 ಕೋಟಿ ರೂಪಾಯಿಗಳ ಅಕ್ರಮ ಆಸ್ತಿಯನ್ನು ಐಟಿ ಇಲಾಖೆ ಪತ್ತೆ ಮಾಡಿದೆ ಎಂದು ಹೇಳಿಕೊಂಡಿದೆ. ಡಿಕೆ ಶಿವಕುಮಾರ್ ಮೇಲೆ ಆದಾಯ ತೆರಿಗೆ ಇಲಾಖೆ 2017 ರಲ್ಲಿ ದಾಳಿ ನಡೆಸಿತ್ತು.
ತನಿಖಾ ಸಂಸ್ಥೆಗಳ ಪ್ರಕಾರ, ಶಿವಕುಮಾರ್ಗೆ ನೇರವಾಗಿ ಸಂಬಂಧಿಸಿರುವ ದೆಹಲಿಯ ನಾಲ್ಕು ಸ್ಥಳಗಳ ಮೇಲೆ ದಾಳಿ ನಡೆಸಿದಾಗ 8.5 ಕೋಟಿ ರೂಪಾಯಿ ಪತ್ತೆಯಾಗಿತ್ತು. ಆ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ದೆಹಲಿಯ ಸಫ್ದರ್ಜಂಗ್ ಎನ್ಕ್ಲೇವ್ನಲ್ಲಿ ಮೂರು ಫ್ಲಾಟ್ಗಳನ್ನು ಖರೀದಿಸಲಾಗಿದೆ ಎಂದು ಐಟಿ ಇಲಾಖೆ ಪತ್ತೆ ಮಾಡಿದೆ. ಇದು ಶಿವಕುಮಾರ್ಗೆ ಸಂಬಂಧಿಸಿದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 2019 ರಲ್ಲಿ ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿತ್ತು. ಕಳೆದ ವರ್ಷ ಡಿಕೆ ಶಿವಕುಮಾರ್ ಅವರ ಮಗಳಿಗೆ ಸಂಬಂಧಿಸಿದ ಶಾಲೆಯ ಮೇಲೆ ಸಿಬಿಐ ದಾಳಿ ನಡೆಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ