ಬೆಂಗಳೂರು:
ಶಂಕಿತ ಭಯೋತ್ಪಾದಕ ಆರೀಫ್ ನನ್ನು ಬಂಧಿಸಲಾಗಿದ್ದು ಬಂಧಿತ ಆರೋಪಿ ಸಾಫ್ಟ್ ವೇರ್ ಇಂಜಿನಿಯರ್ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ನಡೆದ ಕಾರ್ಯಾಚರಣೆಯಲ್ಲಿ ಎನ್ ಐಎ ಮತ್ತು ಐಎಸ್ ಡಿ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ನಗರದ ಥಣಿಸಂದ್ರದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ. ಈತ ಟೆಲಿಗ್ರಾಂ ಆಲ್ ಖೈದಾ ಗ್ರೂಪ್ ನಲ್ಲಿ ಬಹಳ ಸಕ್ರಿಯನಾಗಿದ್ದ ಎಂದು ತಿಳಿದುಬಂದಿದೆ.
ಶಂಕಿತ ಭಯೋತ್ಪಾದಕ ಆರೀಫ್ ನನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳು ಕೂಡ ಈ ಕಾರ್ಯಾಚರಣೆಗೆ ನೆರವು ನೀಡಿವೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪೆನಿ ಒಂದಕ್ಕೆ ಉಗ್ರ ವರ್ಕ್ ಫ್ರಂ ಹೋಂ ಮಾಡುತ್ತಿದ್ದ ಎಂದು ತಿಳಿದುಬಂದಿದೆ.