ಆಂಧ್ರದ ರಾಜ್ಯಪಾಲರಾಗಿ ನ್ಯಾ.ಎಸ್.‌ ಅಬ್ದುಲ್‌ ನಜೀರ್‌ ನೇಮಕ

ನವದೆಹಲಿ

      ರಾಷ್ಟ್ರಪತಿಯವರು  ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗೌರ್ನರ್‌ ನೇಮಕ ಮಾಡಿದ್ದಾರೆ.

    ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ನೇಮಕ ಮಾಡಲಾಗಿದೆ. ಎಸ್. ಅಬ್ದುಲ್ ನಜೀರ್ ಕನ್ನಡಿಗರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಮೀಪದ ಬೆಳವಾಯಿಯವರು.
    ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಅಬ್ದುಲ್‌ ನಜೀರ್ ಈ ವರ್ಷದ ಜನವರಿಯಲ್ಲಿ ನಿವೃತ್ತರಾಗಿದ್ದರು. ಅಯೋಧ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಮೂರ್ತಿಗಳ ಪೀಠದಲ್ಲಿ ಎಸ್. ಅಬ್ದುಲ್ ನಜೀರ್ ಸಹ ಒಬ್ಬರಾಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link