ತುಮಕೂರು
ಹುಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅಂಕಸಂದ್ರ ಮೀಸಲು ಅರಣ್ಯ ಪ್ರದೇಶದಲ್ಲಿ ಘಟನೆ ವರದಿಯಾಗಿದೆ .ತುಮಕೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹುಲಿ ಸಾವನ್ನಪ್ಪಿರುವುದು ಪತ್ತೆಯಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ ಹುಲಿಯ ಸುಳಿವೇ ಇರಲಿಲ್ಲ. ಇದೀಗ ಹುಲಿಯ ಮೃತ ದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ .
ಬಹಿರ್ದೆಸೆಗೆಂದು ಹೋಗಿದ್ದ ಗ್ರಾಮಸ್ಥರ ಕಣ್ಣಿಗೆ ಹುಲಿ ಶವ ಕಾಣಿಸಿದ್ದು.ಕೂಡಲೇ ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹುಲಿಯನ್ನು ಪರಿಶೀಲಿಸಿದ್ದಾರೆ.
ಹುಲಿಯ ಮೈ ಮೇಲೆ ಯಾವುದೇ ಗಾಯ ಅಥವಾ ಹೊಡೆತ ಬಿದ್ದಿರುವ ಗುರುತುಗಳು ಪತ್ತೆಯಾಗಿಲ್ಲ. ಹೀಗಾಗಿ ಹುಲಿ ಸಾವಿನ ರಹಸ್ಯ ಭೇದಿಸಲು ತನಿಖೆ ಮುಂದುವರೆಸಿದ್ದಾರೆ.ಭದ್ರಾ ಅಭಯಾರಣ್ಯದಿಂದ ವೈದ್ಯ ತಂಡ ಆಗಮಿಸುತ್ತಿದ್ದು, ಹುಲಿ ದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.
ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದರು. ಆ ಸಂದರ್ಭದಲ್ಲಿ ಯಾವುದೇ ಹುಲಿ ಪತ್ತೆಯಾಗಿರಲಿಲ್ಲ. ಆದರೆ, ಇದೀಗ ಹುಲಿಯ ಮೃತ ದೇಹ ಪತ್ತೆಯಾಗಿದೆ. ಭದ್ರಾ ಅಭಯಾರಣ್ಯದಿಂದ ವೈದ್ಯರು ಸ್ಥಳಕ್ಕೆ ಬಂದು ಶವ ಪರೀಕ್ಷೆ ನಡೆಸಲಿದ್ದಾರೆ. ನಂತರವಷ್ಟೇ ಹುಲಿ ಸಾವಿನ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ತಿಳಿಸಿದ್ದಾರೆ.
ಸಿಮೆಂಟ್ ಪೈಪ್ ನಲ್ಲಿ ಹುಲಿಯ ಮೃತ ದೇಹ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೇರೆ ಕಡೆಯಿಂದ ಹುಲಿಯನ್ನ ಕೊಂದು ಇಲ್ಲಿಗೆ ತಂದು ಹಾಕಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿಯ ಎಕ್ಸ್ ಫರ್ಡ್ಸ್ ವೈದ್ಯಾಧಿರಿಗಳಿಂದ ಶವ ಪರೀಕ್ಷೆ ನಡೆಸಿದ ಬಳಿಕವಷ್ಟೇ ಹುಲಿಯ ಸಾವಿಗೆ ನಿಖರ ಮಾಹಿತಿ ಲಭ್ಯವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ