ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ :ಡಾ.ಕೆ.ಸುಧಾಕರ್

ಬೆಂಗಳೂರು

   ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಬೆಂಗಳೂರಿನ ಶಿಕ್ಷಕರ ಸದನದಲ್ಲಿ, ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡ ಸಚಿವ ಡಾ.ಕೆ.ಸುಧಾಕರ್, ಸಂಘದ ಮನವಿ ಸ್ವೀಕರಿಸಿ ಮಾತನಾಡಿದರು. 

    ನಾನು ಆರೋಗ್ಯ ಸಚಿವನಾದ ಬಳಿಕ ಪ್ರತಿ ವರ್ಷದಂತೆ ಎರಡು ಬಾರಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹೆಚ್ಚಿಸಲು ಪಾತ್ರ ವಹಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ತಮ್ಮ ಮೊದಲ ಬಜೆಟ್‌ನಲ್ಲಿ ಗೌರವಧನವನ್ನು 1,000 ರೂ. ಹೆಚ್ಚಿಸಿದ್ದಾರೆ. ಈ ಸಲ ಕೂಡ ಆಶಾ ಕಾರ್ಯಕರ್ತೆಯರ ಕೆಲ ಮನವಿಗಳನ್ನು ನೀಡಿದ್ದು, *ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಲಾಗುವುದು* ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap