ಬೆಂಗಳೂರು
ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಅಶ್ವತ್ಥ್ ನಾರಾಯಣ್ ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ಕುರಿತು ಟ್ವೀಟ್ ಮಾಡಿರು ಸಿದ್ದರಾಮಯ್ಯ, ನನ್ನ ಹತ್ಯೆಗೆ ಅಶ್ವತ್ಥ್ ನಾರಾಯಣ್ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.