ಬೆಂಗಳೂರು
ಕ್ರಿಕೆಟ್ ಮೈದಾನದಲ್ಲಿ ಆಟ ಆಡಬೇಕು ಬಿಟ್ಟರೆ ವಾಹನ ನಿಲುಗಡೆ ಈ ವಿಚಾರವಾಗಿ ನಡೆದ ಜಗಳದಲ್ಲಿ ನಾಲ್ವರ ತಂಡ ಇಬ್ಬರು ಯುವಕರನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರ ಬಳಿ ಶುಕ್ರವಾರ ನಡೆದಿದೆ. ಮೃತರಿಬ್ಬರೂ ದೊಡ್ಡಬೆಳವಂಗಲ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ದೊಡ್ಡಬೆಳವಂಗಲದ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಇಂಜಿನಿಯರಿಂಗ್ ಪದವೀಧರ ಭರತ್ ಕುಮಾರ್ (23) ಮತ್ತು ಪದವಿ ಪೂರ್ವ ವಿದ್ಯಾರ್ಥಿ ಪ್ರತೀಕ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
