ವಿಜಯಪುರ:
ನಾನಾಗಲೀ ಅಥವಾ ಎಂ.ಬಿ.ಪಾಟೀಲ್ ಆಗಲೀ ಎಲ್ಒಸಿ ಬಿಡುಗಡೆ ಮಾಡಲು ಐದು ಪೈಸೆ ಲಂಚ ತೆಗೆದುಕೊಂಡಿದ್ದರೆ ರಾಜಕೀಯ ನಿವೃತ್ತಿ ಪಡೆದು, ಸನ್ಯಾಸತ್ವ ತೆಗೆದುಕೊಳ್ಳುವುದಾಗಿ ಮಾಜೀ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.
ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯ 40 ಪರ್ಸೆಂಟ್ ಸರ್ಕಾರ ಲೂಟಿ ಹೊಡೆಯುತ್ತಿದೆ. ಈ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರಧಾನಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಗುತ್ತಿಗೆದಾರರ ಸಂಘವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದರೂ, ಇಂತಹ ಗಂಭೀರ ವಿಷಯದ ಬಗ್ಗೆ ಬೊಮ್ಮಾಯಿ ಸರ್ಕಾರದಿಂದ ಸ್ಪಷ್ಟೀಕರಣವನ್ನೂ ಕೇಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಐದು ವರ್ಷಗಳಲ್ಲಿ 2 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡುವುದಾಗಿ ಭರವಸೆ ನೀಡಿದರು.
2013ರಲ್ಲಿ ಅಧಿಕಾರಕ್ಕೆ ಬರುವ ಮುನ್ನ 2015ರಲ್ಲಿ ರೂ. ನೀರಾವರಿ ಯೋಜನೆಗಳಿಗೆ ಐದು ವರ್ಷಗಳಲ್ಲಿ 50,000 ಕೋಟಿ ರೂ ನೀಡಿದ್ದೇವು. ಆದರೆ ವಾಸ್ತವದಲ್ಲಿ ನಾವು ಐದು ವರ್ಷಗಳಲ್ಲಿ ಸುಮಾರು 56,000 ಕೋಟಿ ರೂ. ಖರ್ಚು ಮಾಡಿದ್ದೇವು. ಇನ್ನೊಂದೆಡೆ ನೀರಾವರಿಗೆ ಸುಮಾರು 1.5 ಲಕ್ಷ ಕೋಟಿ ಖರ್ಚು ಮಾಡುವುದಾಗಿ ಭರವಸೆ ನೀಡಿದ ಬಿಜೆಪಿ 50 ಸಾವಿರ ಕೋಟಿ ರೂ. ಮಾತ್ರ ವ್ಯಯಿಸಿದೆ, ಇದೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವ್ಯತ್ಯಾಸ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ