ಮುಂಬೈ :
ಐಎಎಸ್ ಅಧಿಕಾರಿಯೊಬ್ಬರು ಹೋಟೆಲ್ನಲ್ಲಿ ಊಟ ಮಾಡುತ್ತಿದ್ದಾಗಲೇ ಮೃತಪಟ್ಟ ಘಟನೆ ಮುಂಬೈನಲ್ಲಿ ವರದಿಯಾಗಿದೆ.
ಮಹಾರಾಷ್ಟ್ರ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಪ್ರಶಾಂತ್ ದತ್ತಾತ್ರೇಯ ನವಘರೆ ಎಂಬುವವರು ದಕ್ಷಿಣ ಮುಂಬೈನ ಹೋಟೆಲ್ನಲ್ಲಿ ಊಟ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ.
ಪ್ರಶಾಂತ್ ಅವರು ಹೋಟೆಲ್ ನಲ್ಲಿ ಊಟ ಸೇವಿಸಿದ ನಂತರ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಪ್ರಕಟಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಅವರು ಕಾರ್ಯದರ್ಶಿ ಮಟ್ಟದ ಇಬ್ಬರು ಸಹೋದ್ಯೋಗಿಗಳೊಂದಿಗೆ ಹೋಟೆಲ್ ಗೆ ಊಟಕ್ಕೆ ಬಂದಿದ್ದರು ಎನ್ನಲಾಗಿದೆ.
ಈ ಸಂಬಂಧ ಮಾತಾ ರಾಮಬಾಯಿ ಅಂಬೇಡ್ಕರ್ ರಸ್ತೆ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








