ಬೆಂಗಳೂರು
ರಾಜ್ಯಾದ್ಯಂತ ಮಳೆಯಿಂದ ಹದಗೆಟ್ಟಿರುವ ರಸ್ತೆಗಳ ದುರಸ್ಥಿಗೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ವಿಧಾನಸಭೆಗೆ ಇಂದು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಆಡಳಿತ ಪಕ್ಷದ ಸದಸ್ಯ ಅಪ್ಪಚ್ಚು ರಂಜನ್ ಪರವಾಗಿ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರವಾಹದಿಂದ ಹಾಳಾಗಿರುವ ಕುಶಾಲನಗರದ ರಸ್ತೆಗಳ ದುರಸ್ಥಿಗೆ 50 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ನೀಡುವ ಸಂಬAಧ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಸರ್ಕಾರದ ವಿವಿಧ ಯೋಜನೆಯಡಿ ಲಭ್ಯವಾಗುವ ಅನುದಾನದಿಂದ ಕುಶಾಲನಗರ ಪುರಸಭೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
14 ಮತ್ತು 15ನೇ ಹಣಕಾಸು ಆಯೋಗಗಳ ಅನುದಾನ, ನಗರೋತ್ಥಾನ ಯೋಜನೆ ಸೇರಿದಂತೆ ವಿವಿಧ ಅನುದಾನಗಳನ್ನು ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಅಗತ್ಯಾನುಸಾರ ಹಾಗೂ ನಿಯಮಾನುಸಾರ ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಪ್ರವಾಹದಿಂದ ಹಾಳಾಗಿರುವ ಕುಶಾಲನಗರದ ರಸ್ತೆಗಳ ದುರಸ್ಥಿಗೆ 50 ಕೋಟಿರೂ.ವಿಶೇಷ ಪ್ಯಾಕೇಜ್ ನೀಡುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಕುಶಾಲನಗರ ಪರಸಭೆಯ ವ್ಯಾಪ್ತಿಯಲ್ಲಿನ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಎಲ್ಲ ರೀತಿಯ ಅನುದಾನ ನೀಡಲಾಗಿದೆ. ಅಲ್ಲದೆ, ರಸ್ತೆಗಳ ದುರಸ್ತಿಗೆ ಎಸ್.ಎಫ್.ಸಿ ಮುಕ್ತನಿಧಿಯಡಿ 2021-22ನೇ ಸಾಲಿನಲ್ಲಿ 41 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದರು.
ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ 2019-20ನೇ ಸಾಲಿನಲ್ಲಿ 100 ಲಕ್ಷ ರೂ. ಬಿಡುಗಡೆಯಾಗಿದೆ. ಸರ್ಕಾರದ ವಿವಿಧ ಯೋಜನೆಯಡಿ ಲಭ್ಯವಾಗುವ ಅನುದಾನದಿಂದ ಆಯಾ ಯೋಜನೆಯ ಮಾರ್ಗಸೂಚಿಯ ಅನ್ವಯ ಕುಶಾಲನಗರ ಪುರಸಭೇಯ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಅನುದಾನ ಲಭ್ಯತೆಗೆ ಅನುಗುಣವಾಗಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
14ನೇ ಹಣಕಾಸು ಆಯೋಗದ ಅನುದಾನದಡಿ ಕುಶಾಲನಗರ ಪುರಸಭೆಗೆ 2019 -20ನೇ ಸಾಲಿನ ಮೂಲ ಅನುದಾನ 148 ಲಕ್ಷ ರೂ,ಗಳಲ್ಲಿ ಕಾಮಗಾರಿ ಕೈಗೊಳ?ಳಲು ಮಾರ್ಗಸೂಚಿಸಯಲ್ಲಿ ಸೂಚಿಸಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ 22.16 ಲಕ್ಷ ರೂ ವೆಚ್ಚಮಾಡಿರುವುದಾಗಿ ತಿಳಿಸಿದರು.
15ನೇ ಹಣಕಾಸು ಆಯೋಗದ ಮುಕ್ತ ಅನುದಾನದಡಿ ಕುಶಾಲನಗರ ಪುರಸಭೆಗೆ 2020-21 ಮತ್ತು 2021-22ನೇ ಸಾಲಿನಲ್ಲಿ ಒಟ್ಟು 18.40ಲಕ್ಷ ರೂ. ಮೀಸಲಿಟ್ಟಿದ್ದು, 17.77 ಲಕ್ಷ ರೂ. ವೆಚ್ಚ ಮಾಡಲಾಗಿದೆ. ನಗರೋತ್ಥಾನ ಯೋಜನೆಯಡಿ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿನ ಕಾಮಗಾರಿಗಳಿಗೆ 2022-23ನೇ ಸಾಲಿನಲ್ಲಿ 100 ಕೋಟಿ ರೂ. ವೆಚ್ಚವಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ