ಕರ್ತವ್ಯಕ್ಕೆ ಅಡ್ಡಿ : ಶಶಿ ಹುಲಿಕುಂಟೆ ಬಂಧನ

ತುಮಕೂರು

      ನಗರದ ತಿಲಕ್ ಪಾರ್ಕ್ PSI ರತ್ನಮ್ಮ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಶಶಿ ಹುಲಿಕುಂಟೆ ಆವಾಚ್ಚ ಶಬ್ದಗಳಿಂದ ನಿಂದಿಸಿದ್ದಾನೆ ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ‘Pay MLA’ ಪೋಸ್ಟರ್ ಪ್ರಕರಣದ ವಿಚಾರಣೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ಯುವ ಘಟಕದ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆಮಠ ಅವರನ್ನು ಶನಿವಾರ ಬಂಧಿಸಲಾಗಿದೆ.

     ‘Pay MLA’ ಪೋಸ್ಟರ್ ಅಂಟಿಸುತ್ತಿದ್ದ ನಾಲ್ವರು ಯುವಕರನ್ನು ತಿಲಕ್ ಪಾರ್ಕ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು.ಹುಲಿಕುಂಟೆ ಪೊಲೀಸರಿಗೆ ಧಮಕಿ ಹಾಕಿದ್ದಾನೆ ಬಿಡಲು ಸಾಧ್ಯ ಇಲ್ಲ ಎಂದಾಗ ಇನ್ನು ಮೂರು ತಿಂಗಳು ಕಾಯಿ ನಮ್ಮ ಸರ್ಕಾರ ಬರುತ್ತದೆ ಆಗ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಆವಾಜ್ ಹಾಕಿದ್ದಾನೆ.

     ಠಾಣೆಯಲ್ಲಿದ್ದ ನಾಲ್ಕು ಜನ ಆರೋಪಿಗಳನ್ನು ಸಿನಿಮಿಯ ರೀತಿಯಲ್ಲಿ ಪೊಲೀಸರಿಗೆ ಯಾಮಾರಿಸಿ ಎಸ್ಕೇಪ್ ಮಾಡಿದ್ದಾನೆ.ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಈ ಹಿನ್ನೆಲೆಯಲ್ಲಿ ಪೊಲೀಸರು ಶಶಿ ಹುಲಿಕುಂಟೆ ಯನ್ನು ಬಂಧಿಸಿ  ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.  ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap