ಬೆಂಗಳೂರು
ಮತ್ತೆ ರಾಜ್ಯಕ್ಕೆ ಬಂದಿರುವ ಅಮಿತ್ ಶಾ ಅವರಿಗೆ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅವರು ರಾಜ್ಯಕ್ಕೆ ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹಾಗೂ ಸರ್ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್ʼ ಪರಿಕಲ್ಪನೆಯೇ ಅದ್ಭುತ!! ವಾರೆವ್ಹಾ.. ಅಮಿತ್ ಶಾ ಅವರೇ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
ಅಮಿತ್ ಶಾ ಅವರೇ ಈಗ ಹೇಳಿ. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ? ಎಂದು ಪ್ರಶ್ನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








