ಹಾವೇರಿ : ನಕಲಿ ಬಿಲ್‌ ಹಗರಣ : ಬಿಜೆಪಿ ಶಾಸಕನಿಗೆ ರಿಲೀಫ್‌ ನೀಡಿದ ಹೈಕೋರ್ಟ್…!

ಬೆಂಗಳೂರು

    ಹಾವೇರಿ ಬಿಜೆಪಿ ಶಾಸಕ ನೆಹರೂ ಓಲೇಕರ್‌ಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ಕೊಟ್ಟಿದೆ.   ನಗರಸಭೆಯ  ಕಾಮಗಾರಿಗಳಲ್ಲಿ ನಕಲಿ ಬಿಲ್ ಸೃಷ್ಟಿಸಿ ಬೊಕ್ಕಸಕ್ಕೆ ನಷ್ಟ ಮಾಡಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಎರಡು ವರ್ಷ ಶಿಕ್ಷೆಗೆ ಗುರಿಯಾಗಿದ್ದ ಪ್ರಕರಣದಲ್ಲಿ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು, ಜಾಮೀನು ಮಂಜೂರು ಮಾಡಲಾಗಿದೆ.

  ಚುನಾವಣೆ ಇರುವುದರಿಂದ ಈ ಸಮಯದಲ್ಲಿ ಅವರು ಬಂಧನಕ್ಕೆ ಒಳಗಾಗಿದ್ದರೆ ಅವರೂ ಮತ್ತು ಪಕ್ಷವೂ ಮುಜುಗರ ಅನುಭವಿಸಬೇಕಾಗಿತ್ತು ಆದರೆ ಇದೇ ದೋರಣೆ ಪತ್ರಿಪಕ್ಷದ ನಾಯಕರ ಮೇಲೇಕಿಲ್ಲ ಎಂಬ ಕೂಗು ಸಹ ಕೇಳಿಬಂದಿದೆ .

     ವಿಚಾರಣಾ ನ್ಯಾಯಾಲಯದ ತೀರ್ಪು ರದ್ದು ಕೋರಿ ಹಾವೇರಿಯ ಬಿಜೆಪಿ ಶಾಸಕ ನೆಹರು ಓಲೇಕಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2023ರ ಫೆಬ್ರವರಿ 13ರಂದು ಓಲೇಕಾರ್‌ಗೆ ಎರಡು ವರ್ಷ ಸಾಧಾರಣಾ ಜೈಲು ಶಿಕ್ಷೆ ಮತ್ತು ಎರಡು ಸಾವಿರ ರೂ. ದಂಡ ವಿಧಿಸಿದ್ದ ಹೊರಡಿಸಿದ್ದ ತೀರ್ಪು ಅಮಾನತ್ತಿನಲ್ಲಿಟ್ಟು ಮತ್ತು ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

     2008-13ರವರೆಗೆ ಶಾಸಕರಾಗಿದ್ದ ಅವಧಿಯಲ್ಲಿ ನೆಹರು ಓಲೇಕಾರ್ ಹಾವೇರಿ ನಗರಸಭೆಯ ಕಾಮಗಾರಿಗಳನ್ನು ತಮ್ಮ ಪುತ್ರರಿಗೆ ಗುತ್ತಿಗೆ ಕೊಡಿಸಿದ್ದರು. 5 ಕಾಮಗಾರಿಗಳನ್ನು ನಡೆಸದಿದ್ದರೂ, ಕಾಮಗಾರಿಗಳು ನಡೆದಿವೆ ಎಂದು ನಕಲಿ ಬಿಲ್ ಸೃಷ್ಟಿಸಿ, ಒಟ್ಟು 5.35 ಕೋಟಿ ರೂ. ಪಡೆದು ವಂಚನೆ ಮಾಡಿದ್ದರು. ಇಬ್ಬರು ಪುತ್ರರಿಗೆ ಗುತ್ತಿಗೆ ಕೊಡಿಸಿ ಸ್ವಜನ ಪಕ್ಷಪಾತ ಮಾಡಿದ್ದಾರೆ. ಪ್ರಕರಣದಲ್ಲಿ ಇತರೆ ಆರೋಪಿಗಳ ಜೊತೆಗೆ ಸೇರಿ ಅಪರಾಧಿಕ ಒಳಸಂಚು ರೂಪಿಸಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಶಶಿಧರ್ ಮಹದೇವಪ್ಪ ಹಳ್ಳಿಕೆರೆ ಹಾವೇರಿಯ ಲೋಕಾಯುಕ್ತ ಕೊರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದಿರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap