ದಲಿತರ ಮನೆಗೆ ಬೆಂಕಿ : 25 ಜನರ ವಿರುದ್ದ ಪ್ರಕರಣ

ರಾಣೇಬೆನ್ನೂರು:

         ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಕ್ಕ ಪಕ್ಕದಲ್ಲಿರುವ ಎರಡು ಮನೆಗಳಲ್ಲಿ 12 ಮಂದಿ ಕುಟುಂಬ ಸದಸ್ಯರು ಮಲಗಿದ್ದರು. ಗ್ರಾಮಸ್ಥರ ಗುಂಪು ದಲಿತ ಕಾಲೋನಿಯ ಮನೆಗಳಿಗೆ ನುಗ್ಗಿ ಪೆಟ್ರೋಲ್, ಕಟ್ಟಿಗೆ ಎಸೆಯಲು ಆರಂಭಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

   ಆರೋಪಿಗಳು ಮೊದಲ ಮನೆಯನ್ನು ಸುಟ್ಟು ಹಾಕಿದರು. ಹೊಗೆಯನ್ನು ಗಮನಿಸಿದ ಕುಟುಂಬಸ್ಥರು ಮನೆಯಿಂದ ಹೊರಬಂದು ಪ್ರಾಣ ರಕ್ಷಣೆಗಾಗಿ ಗ್ರಾಮದಿಂದ ಓಡಿ  ಹೋದರು. ಇದೀಗ ಜಿಲ್ಲೆಯ ವಿವಿಧ ಗ್ರಾಮಗಳ ಸಂಬಂಧಿಕರ ಮನೆಗಳಲ್ಲಿ ನೆಲೆಸಿದ್ದಾರೆ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap