ಮೈನ್ ಪುರಿ :
ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯಲ್ಲಿ ಟ್ರಕ್ನಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಪರಿಣಾಮ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಈ ಘಟನೆ ಬುಧವಾರ ನಡೆದಿದೆ ಎಂದು ಪ್ಯಾರಾ ಪೊಲೀಸ್ ಠಾಣಾಧಿಕಾರಿ ಟಿಬಿ ಸಿಂಗ್ ತಿಳಿಸಿದ್ದಾರೆ. ಪ್ರೇಮ್ ಸಿಂಗ್ (50) ತಮ್ಮ ಟ್ರಕ್ನಲ್ಲಿ 13 ಹಸುಗಳನ್ನು ಮೈನ್ಪುರಿಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿ ಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಈಗ ಸ್ಥಿರವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಪ್ರಕರಣ ಸಂಬಂಧ ದಾಳಿಕೋರರ ಮೇಲೆ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಗುಂಡಿನ ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ತನಿಖೆ ನಡೆಯುತ್ತಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








