ಮಂಡ್ಯ : ಬಿಜೆಪಿ ಸೇರ್ಪಡೆ ಬಗ್ಗೆ ಸುಮಲತಾ ಏನೆಂದರು ಗೊತ್ತೇ…?

ಬೆಂಗಳೂರು :

     ಮಂಡ್ಯದ ಸಂಸದೆ ಸುಮಲತಾ ಅಂಬರೀಷ್ ಯಾವ ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ . ಅವರು ಬಿಜೆಪಿ ಸೇರುವ ವದಂತಿಗಳನ್ನು ತಳ್ಳಿಹಾಕಿದ್ದು ಪಕ್ಷಕ್ಕೆ ಸೇರುವುದಿಲ್ಲ ಆದರೆ ನಾನು  ಮೋದಿ ಸರ್ಕಾರವನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ.

     ಮಂಡ್ಯದ ತಮ್ಮ ನಿವಾಸದಲ್ಲಿ ಸುಮಲತಾ ಅಂಬರೀಷ್ ಅವರು ಇಂದು  ಆಪ್ತರ ಸಭೆ ನಡೆಸಿದ್ದಾರೆ.    ಪ್ರಧಾನಿ ಮೋದಿ ಅವರು ಇದೇ ತಿಂಗಳ 12 ಭಾನುವಾರ ಮಂಡ್ಯಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲೇ ಸುಮಲತಾ ಅಂಬರೀಷ್‌ರವರು ಮೋದಿ ಸಮ್ಮುಖದಲ್ಲೇ ಬಿಜೆಪಿ ಸೇರುವರು ಎಂದು ಹೇಳಲಾಗಿದೆ.

ಇದನ್ನೂ ಓದಿ:

ತೀವ್ರ ಕೂತೂಹಲ ಹುಟ್ಟಿಸಿದ ಸುಮಲತಾ ನಡೆ…!

    ಸಂಸದೆ ಸುಮಲತಾ ಅಂಬರೀಷ್‌ರವರಿಗೆ ಪಕ್ಷ ಸೇರುವಂತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಆಹ್ವಾನ ನೀಡಿದ್ದವು. ಆದರೆ, ಸುಮಲತಾ ಅಂಬರೀಷ್‌ರವರು ತಮ್ಮ ಆಪ್ತರೊಂದಿಗೆ ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದೆ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವನ್ನು ಭೇಟಿ ಮಾಡಿ ಚರ್ಚಿಸಿದ್ದರು.

    ಸುಮಲತಾ ಬಿಜೆಪಿ ಸೇರ್ಪಡೆ ಕುರಿತು ಪುಟ್ಟರಾಜು, ಸಂಸದೆ ಸುಮಲತಾ ಅಂಬರೀಷ್, ಇಂದೇ ಬಿಜೆಪಿ ಸೇರುತ್ತಾರೆ ಎಂದು ಜೆಡಿಎಸ್ ಶಾಸಕ ಪುಟ್ಟರಾಜು ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸಮ್ಮುಖದಲ್ಲೇ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಗೆ ಪ್ಲಾನ್ ಮಾಡಿದ್ದರು. ಪ್ರಧಾನಿಯವರ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮ ಆಗಿರುವುದರಿಂದ ಇಂದೇ ಸುಮಲತಾ ಬಿಜೆಪಿ ಸೇರುತ್ತಾರೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link