ಬೆಂಗಳೂರು:
ಅಗ್ನಿ ಅನಾಹುತದಲ್ಲಿ ಸುಟ್ಟು ಕರಕಲಾದ ಬಿಎಂಟಿಸಿ ಬಸ್ ಮೃತಪಟ್ಟ ಬಿಎಂಟಿಸಿ ನಿರ್ವಾಹಕನ ಕುಟಂಬಕ್ಕೆ ಐದು ಲಕ್ಷ ರೂ. ಪರಿಹಾರ ಹಾಗೂ ಆತನ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡುವಂತೆ ಆದೇಶ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಶ್ರೀರಾಮುಲು, ನಿದ್ರೆ ಮಂಪರಿನಲ್ಲಿದ್ದಾಗ ಅನಾಹುತ ಸಂಭವಿಸಿದೆ. ಘಟನೆ ತಿಳಿಯುತ್ತಿದ್ದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಾರಿಗೆ ನೌಕರರಿಗೆ ವೇತನ ಹೆಚ್ಚಳದ ವಿಚಾರದಲ್ಲಿ ಶೀಘ್ರವೇ ಸಿಹಿ ಸುದ್ದಿ ಕೊಡಲಾಗುವುದು. ನಾವು ಶೇ.10ರಷ್ಟು ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದು, ಸರ್ಕಾರಿ ನೌಕರರ ಮಾದರಿಯಲ್ಲಿ ಶೇ.17ರಷ್ಟು ವೇತನ ಹೆಚ್ಚಿಸುವಂತೆ ಸಾರಿಗೆ ಸಿಬ್ಬಂದಿ ಒತ್ತಾಯಿಸುತ್ತಿದ್ದಾರೆ. ಆದರೆ, ಇದರಿಂದ ಸರ್ಕಾರಕ್ಕೆ 6500 ಕೋಟಿ ಹೊರೆಯಾಗಲಿದೆ.