ನನ್ನ ಮಗ ರಾಜಕಾರಣಕ್ಕೆ ಬರಲ್ಲ
ಮಂಡ್ಯ
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಭಾನುವಾರ ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನ, ಅಂದರೆ ಶುಕ್ರವಾರ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಭಾರತೀಯ ಜನತಾ ಪಕ್ಷಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಮುಂಬರವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಅವರು ಸ್ಪಷ್ಟಪಡಿಸಿದರು.