ಮೈಸೂರು:
ಕಾಂಗ್ರೆಸ್ ನ ಕಾರ್ಯಾಧ್ಯಕ್ಷ ಹಾಗೂ ಸಂಸದ ಆರ್. ಧ್ರುವ ನಾರಾಯಣ ಅವರು ಶನಿವಾರ ನಿಧನರಾಗಿದ್ದರೆ.
ಧ್ರು ವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
1961 ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಜನನಿಸಿದ್ದ ಧ್ರುವನಾರಾಯಣ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಕೃಷಿ ಪದವಿ ಪಡೆದುಕೊಂಡಿದ್ದರು. ನಂತರ ಸ್ನಾತಕೋತ್ತರ ಪದವಿ ಪಡೆದು, 1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಶಾಸಕರಾಗಿ ಜಯ ಗಳಿಸಿದ್ದರು.
1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








