ನವದೆಹಲಿ:
ದೇಶದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರು ಸತತ 9 ಗಂಟೆಗಳ ವಿಚಾರಣೆ ನಂತರ ಇಡಿ ಕಚೇರಿಯಿಂದ ತೆರಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್ಎಸ್ ನಾಯಕಿಗೆ ಮಾರ್ಚ್ 16 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕವಿತಾ ಅವರು ಇಂದು ಬೆಳಗ್ಗೆ 11.15ರ ಸುಮಾರಿಗೆ ನಿರ್ದೇಶನಾಲಯದ ಪ್ರಧಾನ ಕಛೇರಿ ಆಗಮಿಸಿದ್ದರು. ಎಎಪಿ ಸರ್ಕಾರಕ್ಕೆ 100 ಕೋಟಿ ರೂಪಾಯಿ ಲಂಚ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ, ಇಡಿ ವಶದಲ್ಲಿರುವ ಸೌತ್ ಗ್ರೂಪ್ ನ ಅರುಣ್ ರಾಮಚಂದ್ರ ಪಿಳ್ಳೆ ಅವರ ಸಮ್ಮುಖದಲ್ಲೇ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
