ನವದೆಹಲಿ:
ಭಅರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,389ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,58,161ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 1,02,591 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,02,14,252 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಇನ್ನೂ ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 843 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,94,349ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,799ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.








