ಭಾರತವು ಹಿಂದೂ ರಾಷ್ಟ್ರವಾಗಿದೆ , ಅದು ಹಾಗೆಯೇ ಉಳಿಯುತ್ತದೆ : ಕೇಂದ್ರ ಸಚಿವ

ಪಾಟ್ನಾ: 

    ಒಂದು ವೇಳೆ, ಆರ್‌ಜೆಡಿ ನಾಯಕರು ತಮ್ಮ ಹೆಣ್ಣು ಮಕ್ಕಳನ್ನು ಮದುವೆಗಾಗಿ ಇತರ ಸಮುದಾಯದ ಜನರಿಗೆ ನೀಡುವುದಾದರೆ, ಅವರು ಹಾಗೆ ಮಾಡಲು ಸ್ವತಂತ್ರರು. ಭಾರತವು ಹಿಂದೂ ರಾಷ್ಟ್ರವಾಗಿದೆ ಮತ್ತು ಅದು ಹಾಗೆಯೇ ಉಳಿಯುತ್ತದೆ’ ಎಂದು ಚೌಬೆ ಶನಿವಾರ ಹೇಳಿದರು.

    ಸನಾತನ ಧರ್ಮಕ್ಕೆ ಸೇರಿದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

     ‘ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ಪುತ್ರಿಯರು ಮುಸ್ಲಿಂ ಪುರುಷರನ್ನು ಮದುವೆಯಾಗಿದ್ದಾರೆ. ಬಿಜೆಪಿ ನಾಯಕರು ತಮ್ಮ ಪುತ್ರಿಯರನ್ನು ಮುಸ್ಲಿಮರಿಂದ ರಕ್ಷಿಸಬೇಕು’ ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಶಾಸಕ ಭಾಯಿ ವೀರೇಂದ್ರ ಹೇಳಿಕೆ ನೀಡಿದ ಒಂದು ದಿನದ ನಂತರ ಸಚಿವರ ಈ ಹೇಳಿಕೆ ಹೊರಬಿದ್ದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link