ನವದೆಹಲಿ:
ರಾಷ್ಟ್ರ ರಾಜಧಾನಿ ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಬಂದಿತರಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ಕೋರ್ಟ್ ಮಾ.20ರಂದು 14 ದಿನಗಳವರೆಗೆ ವಿಸ್ತರಿಸಿದೆ.
ಸಿಸೋಡಿಯಾ ಅವರು ಸದ್ಯ ಮಾರ್ಚ್ 22 ರವರೆಗೆ ಇ.ಡಿ ಕಸ್ಟಡಿಯಲ್ಲಿದ್ದಾರೆ ಮತ್ತು ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು.ಈ ಪ್ರಕರಣವು ದೆಹಲಿ ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನ ಮಾಡುವಲ್ಲಿ ಅನೌಪಚಾರಿಕ ಕ್ರಮಗಳ ಅನುಸರಣೆಗೆ ಸಂಬಂಧಿಸಿದೆ ಎನ್ನಲಾಗಿದೆ.
ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು ಸೋಮವಾರ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 3 ರವರೆಗೆ ವಿಸ್ತರಿಸಿದರು. ಈ ವಿಷಯದಲ್ಲಿ ಜಾಮೀನು ಅರ್ಜಿಯನ್ನು ಮಾರ್ಚ್ 21ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ