ನವದೆಹಲಿ:
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರ ನೋಟಿಸ್ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದ ಜನರು ‘ಭ್ರಷ್ಟ ಬಿಜೆಪಿ ಸರ್ಕಾರದ’ ಎಲ್ಲಾ ಶೋಷಣೆಗಳನ್ನು ನೋಡುತ್ತಿದ್ದಾರೆ ಮತ್ತು ಸಮಯ ಬಂದಾಗ ಉತ್ತರಿಸುತ್ತಾರೆ ಎಂದು ಹೇಳಿದರು.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ನೀಡಿದ ‘ಮಹಿಳೆಯರು ಇನ್ನೂ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ’ ಎಂಬ ಹೇಳಿಕೆಯ ಕುರಿತು ಮಾಹಿತಿ ಸಂಗ್ರಹಿಸಲು ಭಾನುವಾರ ದೆಹಲಿ ಪೊಲೀಸ್ ತಂಡ ರಾಹುಲ್ ಗಾಂಧಿ ಅವರ ನಿವಾಸಕ್ಕೆ ತಲುಪಿದ ನಂತರ ಪ್ರಿಯಾಂಕಾ ಕಿಡಿಕಾರಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ದೌರ್ಜನ್ಯದಿಂದ ಬಳಲುತ್ತಿರುವ ಮಹಿಳೆಯರು, ದಲಿತರು, ಬುಡಕಟ್ಟು ಜನರು, ಬಡವರು, ರೈತರು ಮತ್ತು ಯುವಕರ ಧ್ವನಿಯನ್ನು ಏಕೆ ಎತ್ತಿದ್ದೀರಿ ಎಂದು ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗುತ್ತಿದೆಯೇ?. ಭ್ರಷ್ಟ ಬಿಜೆಪಿ ಸರ್ಕಾರದ ಎಲ್ಲಾ ಶೋಷಣೆಗಳನ್ನು ದೇಶದ ಜನರು ಗಮನಿಸುತ್ತಿದ್ದಾರೆ ಮತ್ತು ಸಮಯ ಬಂದಾಗ ಉತ್ತರ ನೀಡಲಿದ್ದಾರೆ’ ಎಂದು ಅವರು ಹೇಳಿದರು.








