ಬೆಂಗಳೂರು
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕ್ಷೇತ್ರದ ಆಯ್ಕೆ ಗೊಂದಲ ಮುಂದುವರಿದಿದ್ದು, ಕೋಲಾರದಿಂದ ಸ್ಪರ್ಧಿಸುವಂತೆ ಇಂದು ಅಭಿಮಾನಿಗಳು ಸಿದ್ದರಾಮಯ್ಯ ಅವರ ನಿವಾಸಕ್ಕೆ ಮತ್ತಿಗೆ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದರು.
ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಇಂದು ಬೆಂಗಳೂರಿನ ಅವರ ಸರ್ಕಾರಿ ನಿವಾಸದ ಮನೆ ಮುಂದೆ ಜಮಾಯಿಸಿದ್ದರು. ಸಿದ್ದರಾಮಯ್ಯ ಅವರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಶರ್ಟ್ ಬಿಚ್ಚಿ ಬಾರುಕೋಲಿನಿಂದ ಅಭಿಮಾನಿ ಹೊಡೆದುಕೊಂಡು ತಮ್ಮ ಬೆಂಬಲವನ್ನು ಸೂಚಿಸಿದ್ದು ವಿಚಿತ್ರವಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ಎಲ್ಲಿ ಸ್ಪರ್ಧಿಸುವಂತೆ ಸೂಚಿಸುತ್ತದೋ ಅಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ಹೈಕಮಾಂಡ್ ತೀರ್ಮಾನವನ್ನು ಕೋಲಾರ ಜನತೆಗೆ ತಿಳಿಸುತ್ತೇನೆ. ನನ್ನ ಕುಟುಂಬ ಸದಸ್ಯರು, ಹಿತೈಷಿಗಳ, ರಾಜಕೀಯ ಮುಖಂಡರ ಜೊತೆ ಕೂಡ ಚರ್ಚಿಸುತ್ತೇನೆ, ಕೋಲಾರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ ಎಂದರು. ರಾಹುಲ್ ಗಾಂಧಿಯವರು ಒಂದೇ ಕಡೆಗೆ ಅಂಟಿಕೊAಡು ಇರಬೇಡಿ, ಶೇ 1 ರಷ್ಟು ಕೂಡ ನೀವು ರಿಸ್ಕ್ ತೆಗೆದುಕೊಳ್ಳಬೇಡಿ. ಇಡೀ ರಾಜ್ಯಕ್ಕೆ ಸಂಬAಧಿಸಿದ ನಾಯಕರು ನೀವು, ಇಡೀ ರಾಜ್ಯ ಸುತ್ತಾಡಿ, ಜನಾಭಿಪ್ರಾಯ ಹೇಗಿದೆ ಎಂದು ತಿಳಿದುಕೊಂಡು ಒಂದು ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಹೀಗಾಗಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸುತ್ತೇನೆ ಎಂದರು.
.ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿ ಬರುತ್ತಿದ್ದಂತೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಗೊಂದಲಕ್ಕೆ ಒಳಗಾಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ಕೋಲಾರದಲ್ಲೇ ಸ್ಪರ್ಧಿಸಬೇಕೆಂದು ಒತ್ತಾಯಿಸಿ ಒಕ್ಕಲಿಗರ ಮುಖಂಡರು, ಕುರುಬ ಸಮುದಾಯದವರು ಸೇರಿದಂತೆ ಎಲ್ಲಾ ಸಮುದಾಯದ ರೈತರು ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸಿದರು.
ನಗರ ಮತ್ತು ಗ್ರಾಮಾಂತರ ಪ್ರದೇಶದಿಂದ ಕಾಂಗ್ರೆಸ್ ಪಕ್ಷದ ವಿವಿಧ ಸಂಘಟನೆಗಳು ನೂರಾರು ಸಂಖ್ಯೆಯಲ್ಲಿ ವಾಹನಗಳ ಮೂಲಕ ಇಂದು ಬೆಳಿಗ್ಗೆ ಬೆಂಗಳೂರಿನ ಕುಮಾರಕೃಪ ರಸ್ತೆಯಲ್ಲಿರುವ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದರು. ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕ, ದಲಿತ ಸಂಘಟನೆಗಳು, ಹಿಂದುಳಿದ ವರ್ಗಗಳ ಘಟಕ, ಒಕ್ಕಲಿಗ ಸಂಘಟನೆ ಸೇರಿದಂತೆ ಇನ್ನಿತರ ಸಂಘಟನೆಗಳ ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಸಿದ್ದರಾಮಯ್ಯ ನಿವಾಸದ ಮುಂದೆ ಕುಳಿತು ಕೋಲಾರದಿಂದಲೇ ಸ್ಪರ್ಧಿಸಬೇಕು ಸಿದ್ದರಾಮಯ್ಯ ಅವರನ್ನು 50 ಸಾವಿರ ಅಂತರದ ಮತಗಳಿಂದ ಗೆಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದರು. ಹೀಗಾಗಿ ನಾಲ್ಕು ತಿಂಗಳಿAದ ಸಿದ್ದರಾಮಯ್ಯ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇವೆ. ಕೋಲಾರ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಸಿದ್ದರಾಮಯ್ಯ ಇಲ್ಲಿಂದಲೇ ಸ್ಪರ್ಧಿಸಿ ಪಕ್ಷ ಸಂಘಟನೆಗೆ ಬಲ ತುಂಬಬೇಕು. ಸಿದ್ದರಾಮಯ್ಯ ಸ್ಪರ್ಧಿಸಿದರೆ ಜಿಲ್ಲೆಯ 6 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಅನುಕೂಲವಾಗಲಿದೆ ಎಂದು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.
ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಹೀಗಾಗಿ ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಮಾಹಿತಿ ನೀಡುತ್ತಾರೆ. ಈ ವಿಚಾರದಲ್ಲಿ ಗೊಂದಲಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಉಪಸಭಾಪತಿ ಸುದರ್ಶನ್ ಪ್ರತಿಕ್ರಿಯಿಸಿ, ಸಿದ್ದರಾಮಯ್ಯರವರು ಕೋಲಾರದಿಂದಲೇ ಸ್ಪರ್ಧಿಸುತ್ತಾರೆ ಈ ವಿಚಾರದಲ್ಲಿ ಕೆಲವರು ಸುಳ್ಳು ಮಾಹಿತಿಗಳನ್ನು ಹಬ್ಬಿಸುತ್ತಿದ್ದಾರೆ. ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿ ಅವರು ಕೋಲಾರದಿಂದ ಸ್ಪರ್ಧಿಸುವ ಕುರಿತು ಖಚಿತ ಪಡಿಸುತ್ತೇವೆ. ಈ ವಿಚಾರದಲ್ಲಿ ಹಿಂದೆ ಸರಿಯುವ ಪ್ರಶ್ನೆಯಿಲ್ಲ ಎಂದು ತಿಳಿಸಿದರು
.ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ