ಬೆಂಗಳೂರು:
ರಾಜ್ಯದಲ್ಲಿ ಚುನಾವಣೆ ಸನ್ನಿಹದಲ್ಲಿ ಇರುವಾಗ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದು ಇದೇ ಸಾಲಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಉಗಾದಿ ಹಬ್ಬದ ದಿನ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಆದರೆ, ಅಮಾವಾಸ್ಯೆ ಹಿನ್ನೆಲೆಯಲ್ಲಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಿದೆ.
ಯುಗಾದಿ ಹಬ್ಬದ ದಿನದಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಪ್ರಕಟಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮಾತನಾಡಿ, ಅಮಾವಾಸ್ಯೆಯನ್ನು ಅಶುಭ ದಿನವೆಂದು ಪರಿಗಮಿಸಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯನ್ನು ಮುಂದೂಡಲಾಗಿತ್ತು ಎಂದು ಹೇಳಿದ್ದಾರೆ.