ನವದೆಹಲಿ:
ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ಕ್ರಮವು ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಹೆದ್ದಾರಿಗಳಲ್ಲಿ ಪ್ರಯಾಣಿಸಿದ ನಿಖರವಾದ ದೂರಕ್ಕೆ ಶುಲ್ಕ ವಿಧಿಸುವ ಗುರಿಯನ್ನು ಹೊಂದಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
ಕೈಗಾರಿಕಾ ಸಂಸ್ಥೆ ಸಿಐಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಸರ್ಕಾರಿ ಸ್ವಾಮ್ಯದ ಎನ್ಎಚ್ಎಐನ ಟೋಲ್ ಆದಾಯವು ಪ್ರಸ್ತುತ ರೂ 40,000 ಕೋಟಿಗಳಷ್ಟಿದೆ ಮತ್ತು ಇದು 2-3 ವರ್ಷಗಳಲ್ಲಿ ರೂ 1.40 ಲಕ್ಷ ಕೋಟಿಗೆ ಏರಿಕೆಯಾಗಲಿದೆ ಎಂದು ಹೇಳಿದರು.
“ದೇಶದಲ್ಲಿರುವ ಟೋಲ್ ಪ್ಲಾಜಾಗಳನ್ನು ಬದಲಾಯಿಸಲು ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುವುದು. ನಾವು ಮುಂದಿನ ಆರು ತಿಂಗಳಲ್ಲಿ ಈ ಹೊಸ ತಂತ್ರಜ್ಞಾನವನ್ನು ಅಳವಡಿಸುತ್ತೇವೆ” ಎಂದು ತಿಳಿಸಿದರು.
