ಬೆಂಗಳೂರು:
ಮೀಸಲಾತಿ ಬದಲಾವಣೆಯಿಂದ ಯಾರಿಗೂ ಪ್ರಯೋಜನವಾಗದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಪ್ರಯತ್ನಗಳ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
“ಸರ್ಕಾರವು ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದೆ. ಅದನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ವಿತರಿಸಿದೆ. ಒಂದು ಸಮುದಾಯದಿಂದ ಇನ್ನೊಂದು ಸಮುದಾಯಕ್ಕೆ ಕೊಡಲು ಮೀಸಲಾತಿಯನ್ನು ಕಸಿದುಕೊಳ್ಳಲಾಗಿದೆ. ಬಿಜೆಪಿಯವರು ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಆರ್ಥಿಕವಾಗಿ ದುರ್ಬಲ ವರ್ಗದ ಕೋಟಾದಡಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದರೆ, ಅದು ಸುಲಭವಲ್ಲ ತಿಳಿಸಿದರು. ಎಸ್ಸಿಗಳಿಗೆ ಒಳಮೀಸಲಾತಿ ವಿಚಾರ ಸುದೀರ್ಘ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.