ನವದೆಹಲಿ:
ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣದಿಂದ ಉದ್ಭವಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶನಿವಾರ ಏಪ್ರಿಲ್ 5ಕ್ಕೆ ಮುಂದೂಡಿದೆ.
ಸಿಸೋಡಿಯಾ ಪರ ವಕೀಲರು ತಮ್ಮ ಕಕ್ಷಿದಾರರ ಜಾಮೀನು ಅರ್ಜಿಗೆ ಸಲ್ಲಿಸಿದ ಇ.ಡಿ ಉತ್ತರಕ್ಕೆ ಪ್ರತಿಕ್ರಿಯಿಸಲು ಸಮಯ ಕೋರಿದ ನಂತರ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ವಿಚಾರಣೆಯನ್ನು ಮುಂದೂಡಿದರು.ಈ ವಿಚಾರದಲ್ಲಿ ವಿವರವಾದ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಸಿಸೋಡಿಯಾ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.