ಕೊಚ್ಚಿ:
ಮಾಲಿವುಡ್ ನ ಜನಪ್ರಿಯ ನಟ ಹಾಗೂ ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ಅವರು ಭಾನುವಾರ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ , ಅವರಿಗೆ 75 ವರ್ಷ ವಯಸ್ಸಾಗಿತ್ತು ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಭಾನುವಾರ ರಾತ್ರಿ 10.30ರ ಸುಮಾರಿಗೆ ಇನ್ನೋಸೆಂಟ್ ಅವರ ಅರೋಗ್ಯ ಪರಿಸ್ಥಿತಿ ತೀವ್ರ ರೀತಿಯಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಲೇಕ್ಶೋರ್ ಆಸ್ಪತ್ರೆಯ ತಿಳಿಸಿದೆ.
ಅವರು ಸರಿಸುಮಾರು 500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಹಾಸ್ಯ ನಟನಾಗಿ ನಟಿಸಿದ್ದರು ಎಡಪಕ್ಷಗಳ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ನಂತರ 2014 ರಿಂದ 2019 ರವರೆಗೆ ಕೇರಳದ ಚಾಲಕ್ಕುಡಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಕಾರ್ಯನಿರ್ವಹಿಸಿದ್ದರು. ಅವರು ಹಲವಾರು ವರ್ಷಗಳ ಕಾಲ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
