ಎಐಎಡಿಎಂಕೆ ಪಕ್ಷಕ್ಕೆ ನೂತನ ಪ್ರಧಾನ ಕಾರ್ಯದರ್ಶಿ ನೇಮಕ

ಚೆನ್ನೈ: 

    ಜಯ ಲಲಿತಾ ನಿಧನಾ ನಂತರ ಎಐಎಡಿಎಂಕೆ ಪಕ್ಷದಲ್ಲಿ ಗಂದರಗೋಲವಾಗಿ ಒಳಜಗಳ ತಾರಕ್ಕೇರಿದ್ದು ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ಮಂಗಳ ವಾರ ನಿರಾಕರಿಸಿದ ಬೆನ್ನಲ್ಲೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ(ಇಪಿಎಸ್) ಅವರನ್ನು ಎಐಎಡಿಎಂಕೆ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

    ಪ್ರತಿಸ್ಪರ್ಧಿ ಒ ಪನ್ನೀರಸೆಲ್ವಂ(ಒಪಿಎಸ್)ನೇತೃತ್ವದ ಬಣ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

   
     ಪಕ್ಷದ ಪದಾಧಿಕಾರಿಗಳು ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು.ಪಕ್ಷದ ಸಂಸ್ಥಾಪಕ ಎಂಜಿ ರಾಮಚಂದ್ರನ್(ಎಂಜಿಆರ್) ಮತ್ತು ದಿವಂಗತ ಪಕ್ಷದ ವರಿಷ್ಠೆ ಜೆ ಜಯಲಲಿತಾ ಅವರು ಹೊಂದಿದ್ದ ಪಕ್ಷದ ಸರ್ವಶಕ್ತ ಹುದ್ದೆಯಾಗಿರುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಪಕ್ಷದ ಕಾರ್ಯಕರ್ತರಿಗೆ ಹೃದಯಪೂರ್ವಕವಾಗಿ ಧನ್ಯವಾದ ಅರ್ಪಿಸುವುದಾಗಿ ಪಳನಿಸ್ವಾಮಿ ಹೇಳಿದ್ದಾರೆ.ಎಐಎಡಿಎಂಕೆ ಪಕ್ಷದ ಆಂತರಿಕ ಚುನಾವಣಾ ಫಲಿತಾಂಶದ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವ ಸಾಧ್ಯತೆಯಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link