ಬೆಂಗಳೂರು :
ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಇಂದು ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ನೀತಿ ಸಂಹಿತೆ ಇಂದಿನಿಂದ ಜಾರಿ ಮಾಡಿದ್ದಾರೆ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು ಈ ಬಾರಿ ಚುನಾವಣಾ ಅಕ್ರಮ ವರದಿಯಾದಲ್ಲಿ ಕಟ್ಟನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಹಾಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.ಬೆಂಗಳೂರು :
ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಇಂದು ವೇಳಾಪಟ್ಟಿಯನ್ನು ಪ್ರಕಟ ಮಾಡಿದ್ದು ಚುನಾವಣಾ ಅಧಿಸೂಚನೆಯು ದಿನಾಂಕ 13-04-2023, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ : 20-04-2023 , ನಾಮ ಪತ್ರ ಪರಿಶೀಲನೆ 21-04-2023 , ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕ 24-04-2023 ಚುನಾವಣೆಯೂ ದಿನಾಂಕ : 10 -05-2023 ನಡೆಯಲಿದ್ದು ಮೇ 13ಕ್ಕೆ ಮತ ಎಣಿಕೆ ನಡೆಯಿಲಿದೆ ಮತ್ತು ಚುನಾವಣಾ ಪ್ರಕ್ರಿಯೇ ಮೇ 15ಕ್ಕೆ ಕೊನೆಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ .
ವೇಳಾಪಟ್ಟಿ ಘೋಷಣೆ ಯಾದ ಕೂಡಲೇ ರಾಜ್ಯ ದಲ್ಲಿ ನೀತಿ ಸಂಹಿತೆ ಜಾರಿಗೊಳ್ಳಲಿದ್ದು, ಚುನಾವಣಾ ಪ್ರಚಾರ ಗಳಿಗೆ ಮಿತಿ ನಿರ್ಬಂಧ ಗಳು ಅನ್ವಯವಾಗಲಿವೆ.ರಾಜ್ಯ ಚುನಾವಣಾ ಆಯೋಗ ಇದಕ್ಕೆ ಪೂರಕವಾಗಿ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಆಯಾ ಜಿಲ್ಲಾಡಳಿತ ದ ಮೂಲಕ ಮಾಡಿಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ