ಆಪರೇಷನ್ ಕಮಲ ಮಾಡಿವಾಗ ನಿಮ್ಮ ನೈತಿಕತೆ ಎಲ್ಲಿ ಹೋಗಿತ್ತು : ಡಿಕೆ ಶಿವಕುಮಾರ್

ಬೆಂಗಳೂರು

    ಬಿಜೆಪಿ ಶಾಸಕರಿಗೆ ಕರೆ ಮಾಡಿ ಪಕ್ಷಕ್ಕೆ ಆಹ್ವಾನಿಸಿರುವ ಬಗ್ಗೆ ತಮ್ಮನ್ನು ಪ್ರಶ್ನಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದಾಗ ನೈತಿಕತೆ ಎಲ್ಲಿ ಹೋಗಿತ್ತು ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಗುಬ್ಬಿಯ ಮಾಜಿ ಶಾಸಕ ವಾಸು, ಗೃಹ ಮಂಡಳಿಯ ಮಾಜಿ ಅಧ್ಯಕ್ಷ ಹಾಲಪ್ಪ, ಮಂಡ್ಯದ ಸತ್ಯಾನಂದ, ಗುಬ್ಬಿ ಹಾಗೂ ತುಮಕೂರು ಜಿಲ್ಲೆಯಿಂದ ಅನೇಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಕಳೆದ ಚುನಾವಣೆ ನಂತರ ಬಿಜೆಪಿಯವರು ಕಾಂಗ್ರೆಸ್ ನ 13 ಶಾಸಕರು, ಜೆಡಿಎಸ್ ನ 5 ಶಾಸಕರು ಹಾಗೂ ಇಬ್ಬರು ಪಕ್ಷೇತರರು ಸೇರಿದಂತೆ 18 ಶಾಸಕರ ಮನೆ ಬಾಗಿಲು ತಟ್ಟಿ ಅವರನ್ನು ಕರೆದುಕೊಂಡು ಹೋದರಲ್ಲಾ ಆಗ ನೈತಿಕತೆ ಎಲ್ಲಿಗೆ ಹೋಗಿತ್ತು? ಏನಾಗಿತ್ತು ಎಂದರು.

    ಆಪರೇಷನ್ ಕಮಲ ಮಾಡಿ ಬೇರೆ ಪಕ್ಷದ ಶಾಸಕರನ್ನು ಕರೆದುಕೊಂಡು ಹೋಗಿ ನಾಲ್ಕು ವರ್ಷಗಳಿಂದ ಅಧಿಕಾರ ಅನುಭವಿಸಿದ್ದೀರಲ್ಲಾ ಈಗ ಮಾತನಾಡಲು ಸಿಎಂಗೆ ಯಾವ ನೈತಿಕತೆ ಇದೆ?. ನಿಮ್ಮ ಪಕ್ಷಕ್ಕೆ ಬಹುಮತ ಬಾರದೇ ಇದ್ದಾಗ ನೀವು ಅನೈತಿಕವಾಗಿ ದಳ, ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಸರ್ಕಾರ ರಚನೆ ಮಾಡಿದ್ದೀರಿ. ಇದು ರಾಜ್ಯಕ್ಕೆ ಶಾಪವಾಗಿ ಪರಿಣಮಿಸಿದೆ. ಈ ಸರ್ಕಾರವನ್ನು ಕಿತ್ತೊಗೆಯಲು ರಾಜ್ಯದ ಜನ ತೀರ್ಮಾನಿಸಿದ್ದಾರೆ ಎಂದರು.

    ಸತತ ನಾಲ್ಕು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ ಪ್ರಮುಖ ನಾಯಕರು ವಾಸು ಅವರು. ನಾನು ಅನೇಕ ವರ್ಷಗಳಿಂದ ಅವರಿಗೆ ಗಾಳ ಹಾಕುತ್ತಿದ್ದೆ. ಅದಕ್ಕೆ ಬಿದ್ದಿರಲಿಲ್ಲ. ಆದರೆ ಈಗ ರಾಜ್ಯದ ಮತದಾರರ ಚಿತ್ತ ಯಾವ ಕಡೆ ಇದೆ ಎಂದು ತಿಳಿದು ಮತದಾರರ ಗಾಳಕ್ಕೆ ಅವರು ಬಿದ್ದಿದ್ದಾರೆ. ಮತದಾರರಿಗೆ ಬದಲಾವಣೆ, ರಾಷ್ಟಿçÃಯ ಪಕ್ಷ ಬೇಕಾಗಿದೆ. ಅವರ ಆಗಮನ ತುಮಕೂರು ಜಿಲ್ಲೆ ಮಾತ್ರವಲ್ಲ ಹಳೇ ಮೈಸೂರು ಭಾಗಕ್ಕೆ ಶಕ್ತಿ ತುಂಬಲಿದೆ. ಮುಂದಿನ ಕೆಲ ದಿನಗಳಲ್ಲಿ ಅರಸಿಕೆರೆ ಶಾಸಕ ಶಿವಲಿಂಗೇಗೌಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

   ಈ ಹಿಂದೆ ಕಾಂತರಾಜು ಅವರು ಹಾಲಿ ವಿಧಾನಪರಿಷತ್ ಸದಸ್ಯರಾಗಿದ್ದರೂ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಕೋಲಾರದಿಂದ ಹಾಲಿ ಪರಿಷತ್ ಸದಸ್ಯರಾಗಿದ್ದ ಮನೋಹರ್, ಶಾಸಕ ಶ್ರೀನಿವಾಸ ಗೌಡರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಜತೆ ಸೇರಿದ್ದಾರೆ. ಮಧುಬಂಗಾರಪ್ಪ, ದೇವೇಂದ್ರಪ್ಪ ಸೇರಿದಂತೆ 37 ಮಂದಿ ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ ಎಂದರು.

   ಮಾಜಿ ಮಂತ್ರಿ ವಾಸು ಅವರ ಆಗಮನ ಇಡೀ ರಾಜ್ಯಕ್ಕೆ ಶಕ್ತಿ ತುಂಬಿದ್ದಾರೆ. ಅವರು ಬಹಳ ಹಿಂದೆಯೇ ಈ ತೀರ್ಮಾನ ಮಾಡಿದ್ದು, ನಾನು, ಸಿದ್ದರಾಮಯ್ಯ ಹಾಗೂ ಆ ಜಿಲ್ಲೆಯ ನಾಯಕರೆಲ್ಲರೂ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ. ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರಿಗೆ ತ್ರಿವರ್ಣ ಧ್ವಜ ನೀಡಿ ಯಾತ್ರೆಗೆ ಶಕ್ತಿ ತುಂಬಿದ್ದನ್ನು ನಾವು ಸ್ಮರಿಸಬೇಕಿದೆ.

   ಇನ್ನು ಮೂಡಿಗೆರೆ ಕ್ಷೇತ್ರದ ಬಿಜೆಪಿ ನಾಯಕರು ಎಸ್.ಎಂ ಕೃಷ್ಣ ಅವರ ಆಪ್ತರಾದ ಹಾಲಪ್ಪ ಹಾಗೂ ಸತ್ಯಾನಂದ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇವರ ನೇತೃತ್ವದಲ್ಲಿ ನೂರಾರು ಮಂದಿ ಪಕ್ಷ ಸೇರುತ್ತಿದ್ದು, ಅವರನ್ನೂ ನಾವು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ. ಜೆಡಿಎಸ್ ನಿಂದ ಬಾಬು ಹಾಗೂ ಅವರ ಆಪ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link