ನವದೆಹಲಿ
ಮೇ 10ರಂದು ನಡೆಯಲಿರುವ ಚುನಾವಣೆ, ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ತಮ್ಮ ಪಕ್ಷ ತೆಗೆದುಕೊಳ್ಳುವ ಸೀಟುಗಳ ಬಗ್ಗೆ ಶಿವಕುಮಾರ್ ಮಾತನಾಡಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಗೆಲ್ಲುವ ಸ್ಥಾನಗಳ ನಿಖರವಾದ ಸಂಖ್ಯೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ. ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ.ಕರ್ನಾಟಕ 224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾದ 113 ಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ