ಖಾಸಗಿ ಬಸ್ ಪಲ್ಟಿ : ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಹುಳಿಯಾರು

    ಖಾಸಗಿ ಬಸ್ ಪಲ್ಟಿಯಾಗಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹುಳಿಯಾರು ಹೋಬಳಿ ದಸೂಡಿ ಸಮೀಪ ಶನಿವಾರ ನಡೆದಿದೆ.

    ಹಿರಿಯೂರು ತಾಲ್ಲೂಕಿನಿಂದ ದಸೂಡಿ ಗ್ರಾಮದ ಮಾರ್ಗವಾಗಿ ಚಿಕ್ಕನಾಯಕನಹಳ್ಳಿಗೆ ಪ್ರತಿದಿನ ಸಂಚರಿಸುತ್ತಿದ್ದ ಖಾಸಗಿ ಬಸ್ ದಸೂಡಿ ಸಮೀಪ ಆಯಾತಪ್ಪಿ ಪಲ್ಟಿಯಾಗಿದೆ.ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಆದರೂ ಸಹಾ ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ಮತ್ತು ತಾಲ್ಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ