ಬೆಂಗಳೂರು
ಡಿ. ರೂಪಾ ಅವರು ರೋಹಿಣಿ ಕುರಿತಂತೆ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ. ಹಾಗಾಗಿ ಇನ್ನು ಡಿ. ರೂಪಾ, ರೋಹಿಣಿ ವಿರುದ್ಧ ಆರೋಪಗಳನ್ನು ಮಾಡಬಹುದು, ಹೇಳಿಕೆಗಳನ್ನು ನೀಡಬಹುದು.
ತಮ್ಮ ವಾದವನ್ನು ಆಲಿಸದೇ ಏಕಪಕ್ಷೀಯವಾಗಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿ ಡಿ. ರೂಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿ ಆದೇಶಿಸಿದೆ. ಈ ಆದೇಶದಿಂದ ವಿಚಾರಣಾ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವಾದಂತಾಗಿದೆ.