ಬೆಂಗಳೂರು
ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಬಿಜೆಪಿ ತನ್ನ ಪ್ರಮುಖ ಯುವ ನಾಯಕರಲ್ಲಿ ಒಬ್ಬರಾದ ತೇಜಸ್ವಿ ಸೂರ್ಯ ಅವರನ್ನು ಕೈಬಿಟ್ಟಿದೆ. ಇದು ರಾಜ್ಯ ರಾಜಕೀಯದಲ್ಲಿ ತೇಜಸ್ವಿ ಸೂರ್ಯ ಅವರ ಪಾತ್ರ ಮತ್ತು ಪ್ರಭಾವದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದೆ.
30 ವರ್ಷದ ತೇಜಸ್ವಿ ಸೂರ್ಯ ಅವರು ಬಿಜೆಪಿಯ ಯುವ ಘಟಕದ ಅಧ್ಯಕ್ಷರು ಮತ್ತು ಬೆಂಗಳೂರು ದಕ್ಷಿಣದ ಸಂಸದರಾಗಿದ್ದಾರೆ. ಅವರು ಪಕ್ಷದ ಹಿಂದುತ್ವದ ಅಜೆಂಡಾವನ್ನು ಮತ್ತಷ್ಟು ಏರು ಧ್ವನಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇದರ ಜೊತೆಗೆ ವಿರೋಧ ಪಕ್ಷಗಳನ್ನು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ವಿರುದ್ಧದ ಟೀಕೆಗಳಿಗೆ ಹೆಸರುವಾಸಿಯಾಗಿದ್ದಾರೆ.
ಆದರೆ, ಬಿಜೆಪಿ ಬುಧವಾರ ಬಿಡುಗಡೆ ಮಾಡಿರುವ 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿಲ್ಲ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಮತ್ತು ಕೇಂದ್ರದ ಹಲವಾರು ಹಿರಿಯ ನಾಯಕರು ಇದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
