ಟೆಕ್ಸಾಸ್:
ಸ್ಪೇಸ್ ಎಕ್ಸ್ ನಿರ್ಮಿಸಿದ ಜಗತ್ತಿನ ಅತಿದೊಡ್ಡ ರಾಕೆಟ್ ಗುರುವಾರ ಪ್ರಾಯೋಗಿಕ ಉಡಾವಣೆಯಲ್ಲೇ ಸ್ಫೋಟಗೊಂಡಿದೆ.
ಇಂದು ಟೆಕ್ಸಾಸ್ನ ಬೊಕಾ ಚಿಕಾದಲ್ಲಿರುವ ಖಾಸಗಿ ಸ್ಪೇಸ್ಎಕ್ಸ್ ಕಂಪೆನಿಯ ಸ್ಟಾರ್ಬೆಸ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಈ ದೈತ್ಯಾಕಾರದ ರಾಕೆಟ್ ಅನ್ನು ಉಡಾವಣೆ ಮಾಡಲಾಗಿತ್ತು. ಆದರೆ ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಸ್ಫೋಟಗೊಂಡಿದ್ದು, ಗಲ್ಫ್ ಆಫ್ ಮೆಕ್ಸಿಕೊಗೆ ಅಪ್ಪಳಿಸಿದೆ.
ಗಗನಯಾತ್ರಿಗಳನ್ನು ಚಂದ್ರ, ಮಂಗಳ ಹಾಗೂ ಅದರಾಚೆಗಿನ ಗ್ರಹಗಳಿಗೆ ಕಳುಹಿಸುವ ಉದ್ದೇಶದಿಂದ ಸ್ಟಾರ್ಶಿಪ್ ರಾಕೆಟ್ಅನ್ನು ಅಭಿವೃದ್ಧಿಪಡಿಸಲಾಗಿತ್ತು ಉಡಾವಣೆಯಾದ ಮೂರು ನಿಮಿಷದಲ್ಲಿ ಮೊದಲ ಹಂತದಿಂದ ಸ್ಟಾರ್ಶಿಪ್ ಕ್ಯಾಪ್ಸುಲ್ ಬೇರ್ಪಡಬೇಕಿತ್ತು. ಬೇರ್ಪಡಲು ವಿಫಲವಾದ್ದರಿಂದ ರಾಕೆಟ್ ಮಧ್ಯದಲ್ಲಿಯೇ ಸ್ಟೋಟಗೊಂಡಿದೆ. ಸ್ಟೋಟಗೊಂಡ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ