ಬೆಂಗಳೂರು :
ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ ಆರು ಬೋಗಿಗಳು ಹಳಿ ತಪ್ಪಿವೆ. ಬೆಂಗಳೂರಿನಿಂದ ಸುಮಾರು 99 ಕಿಲೋ ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, 12 ರೈಲುಗಳ ಓಡಾಟದಲ್ಲಿ ವ್ಯತ್ಯಯವಾಗಿದೆ.
ರೈಲಿನಲ್ಲಿದ್ದ ಲೋಕೋ ಪೈಲಟ್ , ಸಹಾಯಕ ಲೋಕೋ ಪೈಲಟ್ ಮತ್ತು ಟ್ರೈನ್ ಮ್ಯಾನೇಜರ್ ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಈ ಮಾರ್ಗದಲ್ಲಿ ಓಡಾಡುವ ನಾಲ್ಕು ರೈಲುಗಳನ್ನು ರದ್ದುಗೊಳಿಸಲಗಿದ್ದು, ಎಂಟು ರೈಲುಗಳ ಮಾರ್ಗಗಳನ್ನು ಬದಲಿಸಲಾಗಿದೆ. ಸದ್ಯ ಈ ಮಾರ್ಗವನ್ನು ಮುಚ್ಚಲಾಗಿದ್ದು ಮರುಸ್ಥಾಪನೆ ಕಾರ್ಯ ನಡೆಯುತ್ತಿದೆ.